ಕೊಪ್ಪಳ: 2011-12ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದಾಗಿ ಬೆಳೆ ಹಾನಿಯಾಗಿ ತತ್ತರಿಸಿರುವ ಜಿಲ್ಲೆಯ ರೈತರಿಗೆ ತಾತ್ಕಾಲಿಕ ಪರಿಹಾರ ನೀಡುವ ಸಂಬಂಧ 5.81 ಕೋಟಿ ರೂಪಾಯಿ (581.38 ಲಕ್ಷ ರೂಪಾಯಿ) ಬಿಡುಗಡೆಯಾಗಿದೆ.

ಈ ಅನುದಾನವನ್ನು ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯ (ಎಸ್ಡಿಆರ್ಎಫ್) ಮಾರ್ಗಸೂಚಿಯಂತೆ ರೈತರಿಗೆ ವಿತರಣೆ ಮಾಡುವಂತೆ ತಹಸೀಲ್ದಾರರಿಗೆ ಸೂಚಿಸಲಾಗಿದೆ.

ಕೊಪ್ಪಳ ತಾಲ್ಲೂಕಿಗೆ 1.32 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಗಂಗಾವತಿ ತಾಲ್ಲೂಕಿಗೆ 1.15 ಕೋಟಿ, ಕುಷ್ಟಗಿ ತಾಲ್ಲೂಕಿಗೆ 1.68 ಕೋಟಿ ರೂಪಾಯಿ ಹಾಗೂ ಯಲಬುರ್ಗಾ ತಾಲ್ಲೂಕಿಗೆ 1.66 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು `ಪ್ರಜಾವಾಣಿ'ಗೆ ತಿಳಿಸಿವೆ.

ಸುವರ್ಣಭೂಮಿ ಯೋಜನೆ, ಆಲೂಗಡ್ಡೆ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಸೌಲಭ್ಯ ಪಡೆದಿರುವ ಫಲಾನುಭವಿಗಳನ್ನು ಈ ತಾತ್ಕಾಲಿಕ ಪರಿಹಾರ ವಿತರಣೆಗೆ ಪರಿಗಣಿಸುವಂತಿಲ್ಲ. ಅಲ್ಲದೇ, ಮಳೆಯಾಶ್ರಿತ ಪ್ರದೇಶದಲ್ಲಿ ಶೇ 50ಕ್ಕಿಂತ ಹೆಚ್ಚು ಬೆಳೆ ಹಾನಿ ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ಧನ ವಿತರಣೆ ಮಾಡಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿನಲ್ಲಿ ಬಿತ್ತನೆಯಾಗಿರುವ ಕ್ಷೇತ್ರಕ್ಕೆ ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಹಾನಿಯನ್ನು ಅಂದಾಜು ಮಾಡಿ, ಪರಿಹಾರ ಧನವನ್ನು ಹಂಚಿಕೆ ಮಾಡಬೇಕು ಎಂಬುದಾಗಿ ಇವೇ ಮೂಲಗಳು ತಿಳಿಸಿವೆ.

ವರದಿಗೆ ಸೂಚನೆ: ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಬೆಳೆ ಹಾನಿಯ ಬಗ್ಗೆ ಸಮೀಕ್ಷಾ ಕಾರ್ಯವನ್ನು ಕೈಗೊಂಡು, ಡಿ. 10 ರ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಬೆಳೆ ಹಾನಿ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದೂ ಅವರು ಜಂಟಿ ಕೃಷಿ ನಿರ್ದೇಶಕ ಪದ್ಮಯ್ಯ ನಾಯಕ್ ಅವರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸಹ ಸಭೆಯಲ್ಲಿ ಚರ್ಚಿಸಲಾಯಿತು. ಈಗಾಗಲೇ ಗುರುತಿಸಲಾಗಿರುವ ಸಮಸ್ಯಾತ್ಮಕ ಗ್ರಾಮಗಳಿಗೆ ನೀರು ಪೂರೈಕೆ ಮಾಡಲು 3.16 ಕೋಟಿ ರೂಪಾಯಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಎಂಜಿಯನಿರಿಂಗ್ ವಿಭಾಗದ ಕಾರ್ಯ ಪಾಲಕ ಎಂಜಿನಿಯರ್ ಮುರಳಿಧರ್ ಅವರು ಸಭೆಗೆ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.