ಬುಧವಾರ, ನವೆಂಬರ್ 13, 2019
21 °C

ಹಿಂದುಳಿದವರ ಏಳಿಗೆಗೆ ಶ್ರಮಿಸಲು ಸಲಹೆ

Published:
Updated:

ಶಿಕಾರಿಪುರ: ಡಾ.ಬಿ.ಆರ್. ಅಂಬೇಡ್ಕರ್ ಆಶಯದಂತೆ ಸಮಾಜದಲ್ಲಿರುವ ಹಿಂದುಳಿದವರ ಏಳಿಗೆಗೆ ನಾವೆಲ್ಲಾ ಶ್ರಮಿಸಬೇಕಿದೆ ಎಂದು ತಹಶೀಲ್ದಾರ್ ಪ್ರಕಾಶ್ ಗಣಾಚಾರಿ ಅಭಿಪ್ರಾಯಪಟ್ಟರು.ಪಟ್ಟಣದಲ್ಲಿ ಭಾನುವಾರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ವಿವಿಧ ಇಲಾಖೆ, ಸಂಘಟನೆಯಿಂದ ನಡೆದ  ಡಾ.ಬಿ.ಆರ್. ಅಂಬೇಡ್ಕರ್ ಅವರ  ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿದರು.ಡಾ.ಬಿ.ಆರ್. ಅಂಬೇಡ್ಕರ್ ಜೀವನದ ಬಗ್ಗೆ ಬಿಆರ್‌ಪಿ ಶಿವ್ಯಾನಾಯ್ಕ ಉಪನ್ಯಾಸ ನೀಡಿದರು.ಪುರಸಭೆ ಮುಖ್ಯಾಧಿಕಾರಿ ಮನೊಹರ್, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವದೇವ್, ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್ ಸೂಲೆಪೇಟ್ಕಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರಭಾಕರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್, ಉಪ ತಹಶೀಲ್ದಾರ್ ಎನ್.ಜೆ. ನಾಗರಾಜ್, ಶಿರಸ್ತೇದಾರ್ ರಾಜೀವ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಬಸವರಾಜಪ್ಪ ರೋಟೆ, ಪಿ. ಶಿವಣ್ಣ, ಬಿ. ಯಲ್ಲಪ್ಪ, ಸೋಮಶೇಖರ್ ಶಿವಮೊಗ್ಗಿ, ರವೀಶ್, ಎಲ್. ರಮೇಶ್, ಚುರ್ಚಿಗುಂಡಿ ಜಗದೀಶ್, ಮಾರವಳ್ಳಿ ಬಸವರಾಜ್, ಮಧು, ಎಲ್. ಬಸವರಾಜ್, ಎಲ್. ದೇವರಾಜ್, ಭದ್ರಾಪುರ ಶಿವು, ಇಟ್ಟಿಗೆಹಳ್ಳಿ ಪ್ರಕಾಶ್ ಉಪಸ್ಥಿತರಿದ್ದರು.ವಿವಿಧ ಸಂಘಟನೆಗಳಿಂದ ಜಯಂತಿ ಆಚರಣೆ: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಸಿಹಿ ವಿತರಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತ ಸಂಘಟನೆ ಆಶ್ರಯದಲ್ಲಿ ಪದಾಧಿಕಾರಿಗಳು ಅಂಬೇಡ್ಕರ್ ಜಯಂತಿ ಆಚರಿಸಿದರು.ನೆನಪಿನ ದಿನ

ಭದ್ರಾವತಿ:  ಸಂವಿಧಾನಶಿಲ್ಪಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ ನೆನಪನ್ನು ಹಲವೆಡೆ ಅದ್ದೂರಿಯಾಗಿ ಆಚರಿಸಲಾಯಿತು.ಚುನಾವಣೆ ನೀತಿಸಂಹಿತೆ ನಡುವೆಯೂ ಸಹ ರಾಷ್ಟ್ರೀಯ ಹಬ್ಬಗಳ ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದಲ್ಲಿ ಜರುಗಿದ ಸಮಾರಂಭದಲ್ಲಿ ತಹಶೀಲ್ದಾರ್ ಸಿದ್ದಮಲ್ಲಪ್ಪ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.ತಾ.ಪಂ ಅಧಿಕಾರಿ ಮಲ್ಲೇಶಪ್ಪ, ಸಿಡಿಪಿಒ ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಪ್ಪ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಜರಾಗಿ ಗೌರವ ಸಮರ್ಪಿಸಿದರು.ಎಂಪಿಎಂ: ಮೈಸೂರು ಕಾಗದ ಕಾರ್ಖಾನೆ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿ ಶ್ರೀನಿವಾಸನ್ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪುಷ್ಪಮಾಲಿಕೆ: ಅಂಬೇಡ್ಕರ್ ವೃತ್ತದಲ್ಲಿನ ಬಾಬಾಸಾಹೇಬ್ ಪುತ್ಥಳಿಗೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಪುಷ್ಪಮಾಲಿಕೆ ಹಾಕಿ ಗೌರವ ಸಮರ್ಪಿಸಿದರು.ದಲಿತ ಸಂಘರ್ಷ ಸಮಿತಿ ಜಾತ್ಯಾತೀತ ಮುಖಂಡ ಕೈಲಾಸ್‌ಕುಮಾರ್ ನೇತೃತ್ವದಲ್ಲಿ ಆಗಮಿಸಿದ ನೂರಾರು ಕಾರ್ಯಕರ್ತರು ಘೋಷಣೆ ಕೂಗಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವಿಸಿದರು.

ಪ್ರತಿಕ್ರಿಯಿಸಿ (+)