ಮಂಗಳವಾರ, ಜೂನ್ 15, 2021
23 °C

ಹಿಂದುಳಿದವರ ನಿರ್ಲಕ್ಷ್ಯ: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ: ರಾಜ್ಯದಾದ್ಯಂತ ಕಳೆದ ಹಲವು ವರ್ಷಗಳಿಂದ ರೈತರ, ಕಾರ್ಮಿಕರ, ದಲಿತ ಮತ್ತು ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸುವ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಅದರಲ್ಲೂ ಹೆಚ್ಚಾಗಿ ಮಂಡ್ಯ ಜಿಲ್ಲೆಯ ಜನತೆಯ ಪರವಾಗಿ ಹೋರಾಟ ಮಾಡಿದ್ದೇನೆ ಎಂದು ಬಹುಜನ ಸಮಾಜ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಹೇಳಿದರು.ಈಚೆಗೆ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳಿಗಿಂತ ಸೂಕ್ತ ಅಭ್ಯರ್ಥಿ ನಾನು. ಎಲ್ಲ ವರ್ಗದ ಜನತೆ ನನ್ನನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಂಡ್ಯ ಕ್ಷೇತ್ರದಲ್ಲಿ ರೈತರು, ಕಾರ್ಮಿಕರು, ಬಡವರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಕಾಂಗ್ರೇಸ್, ಜೆಡಿಎಸ್‌, ಬಿಜೆಪಿ ಪಕ್ಷಗಳು ಸಂಪೂರ್ಣ ನಿರ್ಲಕ್ಷಿಸುತ್ತಿರುವುದನ್ನು ಜನತೆ ಮನಗಂಡಿದೆ. ಮತದಾರರು ಈ ಭಾರಿಯ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಗೆ ತಕ್ಕಪಾಠ ಕಲಿಸಲು ಬಿಎಸ್‌ಪಿ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎನ್. ನರಸಿಂಹಮೂರ್ತಿ, ಉಪಾಧ್ಯಕ್ಷೆ ದೇವೀರಮ್ಮ, ಮಂಡ್ಯ ತಾಲ್ಲೂಕು ಅಧ್ಯಕ್ಷ ವಜ್ರಮುನಿ, ತಾಲ್ಲೂಕು ಘಟಕ ಅಧ್ಯಕ್ಷ  ಮಹದೇವ್, ತಾಲ್ಲೂಕು ಸಂಯೋಜಕರಾದ ಹಡೇನಹಳ್ಳಿ ವಿಜಿ, ಬದರಿಕೊಪ್ಪಲು ವೆಂಕಟೇಶ್, ಜಯಕುಮಾರ್, ಸುರೇಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.