ಗಜೇಂದ್ರಗಡ: ಹಿಂದುಳಿದ ವರ್ಗಗಳ ನಾಗರಿಕರು ವಾಸಿಸುತ್ತಿರುವ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೆಲವೇ ತಿಂಗಳಲ್ಲಿ ಜಿಲ್ಲೆಯ ಹಿಂದುಳಿದ ಪ್ರದೇಶಗಳು ಮಾದರಿ ಪ್ರದೇಶಗಳಾಗಿ ಕಂಗೊಳಿಸುತ್ತವೆ ಎಂದು ಜಿ.ಪಂ. ಅಧ್ಯಕ್ಷೆ ಬಸವರಾಜೇಶ್ವರಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಶುಕ್ರವಾರ ಸಮೀಪದ ರಾಜೂರ ಗ್ರಾಮದ ಹರಿಜನ ಕೆರಿಯಲ್ಲಿ 25 ಲಕ್ಷ ಅನುದಾನದಲ್ಲಿ ಗಟಾರ ಮತ್ತು ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ ಎಂದು ಹೇಳಿ ರಾಷ್ಟ್ರದ ಎಲ್ಲ ಹಿಂದುಳಿದ ವರ್ಗಗಳ ಮತಗಳನ್ನು ಪಡೆದು ನಿರಂತರ ಐದೂವರೆ ದಶಕ ರಾಷ್ಟ್ರವನ್ನಾಳಿದ ಕಾಂಗ್ರೆಸ್ ಕನಿಷ್ಠ ಅಭಿವೃದ್ಧಿಗೆ ಮುಂದಾಗದಿರುವ ಪರಿಣಾಮವೇ ಇಂದಿಗೂ ರಾಜ್ಯ ಮತ್ತು ರಾಷ್ಟ್ರದ ಹಿಂದುಳಿದ ಪ್ರದೇಶಗಳು ಸಂಪೂರ್ಣ ಅಭಿವೃದ್ಧಿ ವಂಚಿತಗೊಂಡಿವೆ. ಪರಿಣಾಮ ಅಲ್ಲಿ ವಾಸಿಸುವ ಜನತೆ ನರಕ ಸದೃಶ್ಯ ಬದುಕು ಸಾಗಿಸುತ್ತಿರುವುದೇ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಸಾಧನೆ ಎಂದು ಲೇವಡಿ ಮಾಡಿದರು.

ಬಂಜಾರ ಅಭಿವೃದ್ಧಿ ನಿಗಮ ಸ್ಥಾಪನೆ
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರದ ಕೊಡುಗೆ ಏನು? ಎಂದು ಪ್ರಶ್ನಿಸುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸ್ಥಾಪಿಸಿದ `ಬಂಜಾರ ಅಭಿವೃದ್ಧಿ ನಿಗಮ~ವೇ ಸಾಕ್ಷಿ. ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ ಏಕೈಕ ಸರ್ಕಾರ ಎಂಬ ಹೆಗ್ಗಳಿಕೆ ರಾಜ್ಯ ಸರ್ಕಾರಕ್ಕಿದೆ ಎಂದರು.

ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ:
ಇಲಾಖೆಯ ನಿರ್ಬಂಧನೆಗಳಿಗೆ ಅನುಗುಣವಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ನಾಗರಿಕರ ಅನುಕೂಲಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಜೊತೆಗೆ ಕಾಮಗಾರಿಗಳ ಗುಣಮಟ್ಟದ ಕುರಿತು ಅಪಸ್ವರಗಳು ಕೇಳಿ ಬಾರದಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಎಂದು ಎಂಜಿನಿಯರ್ರು ಹಾಗೂ ಗುತ್ತಿಗೆದಾರರಿಗೆ ಕಿವಿಮಾತು ಹೇಳಿದರು.

ಜಿ.ಪಂ ಸದಸ್ಯ ರಮೇಶ ಮುಂದಿನಮನಿ ಮಾತನಾಡಿ. ಹಿಂದುಳಿದ ಪ್ರದೇಶಗಳಲ್ಲಿ ಸರ್ಕಾರ ರಸ್ತೆ, ಗಟಾರು, ಚರಂಡಿ, ಸಮುದಾಯ ಮಹಿಳಾ ಶೌಚಾಲಯ, ಸಮುದಾಯ ಭವನ, ಆಶ್ರಯ ಮನೆ ಇತ್ಯಾದಿಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಿದ್ದರೂ ಕೆಲವೊಂದಿಷ್ಟು ಪ್ರದೇಶಗಳಲ್ಲಿ ಸ್ಥಳೀಯರು ಸ್ವಚ್ಛತೆಗೆ ಆದ್ಯತೆ ನೀಡದಿರುವ ಪರಿಣಾಮ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲವೆನೋ ಎಂಬಂತೆ ಭಾಸವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸ್ವಚ್ಛತೆಗೆ ಆದ್ಯತೆ ನೀಡಿದಾಗ ಮಾತ್ರ ಎಲ್ಲವೂ ವ್ಯವಸ್ಥಿತವಾಗಿ ನಡೆಯುತ್ತದೆ ಎಂದರು.

ತಾ.ಪಂ ಸದಸ್ಯೆ ಲಲಿತಾ ಪೂಜಾರ, ರಾಜೂರ ಗ್ರಾ.ಪಂ ಅಧ್ಯಕ್ಷೆ ಹನಮವ್ವ ಶಂಕ್ರಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರಶಾಂತ ವರಗಪ್ಪನವರ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ನಿಗಮ ಗದಗ ವಿಭಾಗದ ಅಧಿಕಾರಿಗಳು, ಎಂಜಿನಿಯರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.