ಹಿಂದುಳಿದ ವರ್ಗಗಳ ಸಮಾವೇಶ: ಸಭೆ

7

ಹಿಂದುಳಿದ ವರ್ಗಗಳ ಸಮಾವೇಶ: ಸಭೆ

Published:
Updated:

ಮಂಡ್ಯ: ಬೆಂಗಳೂರಿನಲ್ಲಿ ನಡೆಯಲಿರುವ ಹಿಂದುಳಿದ ವರ್ಗದವರ ರಾಜ್ಯಮಟ್ಟದ ಸಮಾವೇಶವನ್ನು ಯಶಸ್ವಿಗೆ ಶ್ರಮಿಸಲು ಮಂಡ್ಯದ ಗಾಂಧಿ ಭವನದಲ್ಲಿ ನಡೆದ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಲಾಯಿತು.ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ಕಲ್ಯಾಣ ಇಲಾಖೆಗೆ ಒಬ್ಬರೇ ಮಂತ್ರಿಯಿದ್ದಾರೆ. ಆದ್ದರಿಂದ ತ್ವರಿತಗತಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ಡಿ.ದೇವರಾಜು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಲ್. ಸಂದೇಶ್ ಆಗ್ರಹಿಸಿದರು.ಪಕ್ಕದ ರಾಜ್ಯಗಳಲ್ಲಿ ಸಹಕಾರ ಕ್ಷೇತ್ರದಲ್ಲಿ ಹಿಂದುಳಿದವರಿಗೆ ಮೀಸಲಾತಿ ಇದೆ. ಇಲ್ಲಿಯೂ ಅದನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಮಾವೇಶದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎಚ್.ನಾಗರಾಜು, ವೇದಿಕೆ ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣ, ಮಹಿಳಾ ಘಟಕದ ಅಧ್ಯಕ್ಷ ಶಿಲ್ಪಾ, ಎನ್‌್್. ದೊಡ್ಡಯ್ಯ, ಕಾಂತರಾಜು, ಅನಿತಾ, ರೇಖಾ ಮತ್ತಿತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry