ಲಖನೌ(ಐಎಎನ್ಎಸ್): ಉತ್ತರಪ್ರದೇಶ ಲೋಕಸೇವಾ ಆಯೋಗವು ಮೀಸಲಾತಿ ನಿಯಮವನ್ನು ಬದಲಾಯಿಸಿರುವುದನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಅಲಹಾಬಾದ್ನಲ್ಲಿ ಸೋಮವಾರ ನಡೆಸಿದ ಪ್ರತಿಭಟನಾ ರ್ಯಾಲಿ ಹಿಂಸೆಗೆ ತಿರುಗಿದ ಪರಿಣಾಮ ನೂರಕ್ಕೂ ಹೆಚ್ಚು ವಾಹನಗಳು ಜಖಂಗೊಂಡವು.

ಲೋಕಸೇವಾ ಆಯೋಗದ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿಯ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ಜಖಂಗೊಳಿಸಿದರು. ಉದ್ರಿಕ್ತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

`ಉತ್ತರಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ)ವು ಪರೀಕ್ಷಾ ಮೀಸಲಾತಿ ನೀತಿಯನ್ನು ಬದಲಾಯಿಸಿದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ' ಎಂದು ಅಲಹಾಬಾದ್ ಡಿಐಜಿ ಎನ್. ರವೀಂದ್ರ ಸುದ್ದಿ ಸಂಸ್ಥೆಗೆ ತಿಳಿಸಿದರು.
ಮೀಸಲಾತಿ ನೀತಿಯನ್ನು ಬದಲಾವಣೆ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.