ಗುರುವಾರ , ಮೇ 19, 2022
23 °C

ಹಿ.ಪ್ರ ಭೂಕುಸಿತ: ಸಂಚಾರ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಮ್ಲಾ (ಪಿಟಿಐ) : ಹಿಮಾಚಲದಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಕಡೆ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದಾಗಿ ಮಂಡಿ-ಕುಲು, ಮಂಡಿ-ಪಲಂಪೂರ್, ಮಂಡಿ-ಶಿಮ್ಲಾ ಹೆದ್ದಾರಿಗಳಲ್ಲಿ ಸತತ ಮೂರರಿಂದ ನಾಲ್ಕು ಗಂಟೆಯವರೆಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.ನದಿಯ ಸಮೀಪ ವಾಸಿಸುವವರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.  ಆಸ್ಪತ್ರೆಯೊಂದು ಸಂಪೂರ್ಣ ಜಲಾವೃತವಾಗಿದೆ. ಯಮುನಾ ನದಿಯ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ಮೂಲಗಳು ತಿಳಿಸಿವೆ.ಮುಂಗಾರು ಅಬ್ಬರ (ಲಖನೌ ವರದಿ) : ನೈರುತ್ಯ ಮುಂಗಾರು ಉತ್ತರ ಪ್ರದೇಶದಲ್ಲಿ ಸಾಧಾರಣವಾಗಿದ್ದು, ಕಳೆದ 24 ಗಂಟೆಯಲ್ಲಿ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.ನೈರುತ್ಯ ಮುಂಗಾರು ರಾಜ್ಯದ ಪಶ್ಚಿಮ ಭಾಗದಲ್ಲಿ ಸಾಧಾರಣವಾಗಿದ್ದು,  ಪೂರ್ವ ಭಾಗದಲ್ಲಿ ದುರ್ಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.