ಬೆಂಗಳೂರು: `ದಿ ಹಿಮಾಲಯ ಡ್ರಗ್ ಕಂಪನಿ ಯ ಆಡಳತ ವರ್ಗ ಕಾರ್ಮಿಕರಿಗೆ ವೇತನ ಹೆಚ್ಚಳ ಮಾಡದೆ ಸ್ವಯಂ ನಿವೃತ್ತಿ ಪಡೆಯುವಂತೆ ಒತ್ತಾಯ ಮಾಡುತ್ತಿದೆ ಎಂದು ಆರೋಪಿಸಿ ಏಪ್ರಿಲ್ 19 ರಂದು ವಿಧಾನಸಭಾ ಚಲೋ ಹಮ್ಮಿಕೊಂಡಿದ್ದೇವೆ~ ಎಂದು ಕರ್ನಾಟಕ ವರ್ಕರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಇ.ಕೆ.ಎನ್.ರಾಜನ್ ಹೇಳಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕಂಪೆನಿಯ ಆಡಳಿತ ವರ್ಗದ ಪ್ರಾಯೋಜಕತ್ವದಲ್ಲಿ ನಕಲಿ ಕಾರ್ಮಿಕ ಸಂಘವನ್ನು ಹುಟ್ಟುಹಾಕಿ ವೇತನ ಮತ್ತು ಇನ್ನಿತರೆ ಭತ್ಯೆಗಳನ್ನು ಹೆಚ್ಚಿಸುವುದಕ್ಕೆ ಅಡ್ಡಿಪಡಿಸುತ್ತಿದೆ. ಈ ಬಗ್ಗೆ ಆಡಳಿತ ವರ್ಗದವರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಕಾರ್ಮಿಕ ಇಲಾಖೆಗೆ ದೂರು ನೀಡಿದ್ದರು ಇದುವರೆಗೆ ಯಾವುದೇ ರೀತಿಯಲ್ಲಿ ಕ್ರಮ ವನ್ನು ಕೈಗೊಂಡಿಲ್ಲ ಎಂದು ಆಪಾದಿಸಿದರು.

`70 ವರ್ಷಗಳ ಹಿಂದೆ ಪ್ರಾರಂಭವಾದ ಕಂಪನಿ ಇಂದು ಬೃಹತ್ ವಿಸ್ತಾರವಾಗಿ ಬೆಳೆದಿದೆ. ಈ ಎಲ್ಲ ಬೆಳವಣಿಗೆಗೆ ಆರಂಭದಿಂದ ದುಡಿಯುತ್ತಿರುವ ಕಾರ್ಮಿಕರ ಪ್ರಮುಖರು ಕಾರಣರಾಗಿದ್ದು, ಆರಂಭದಲ್ಲಿ ಯಾವುದೇ ರೀತಿಯಲ್ಲಿ ಸೌಲಭ್ಯಗಳಿಲ್ಲದ ಸಮಯದಲ್ಲಿ ಕಾರ್ಮಿಕರು ಕೈಯಿಂದ ಚಾಲನೆ ಮಾಡುವ ಯಂತ್ರಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇಂದು ಆಧುನಿಕ ಯಂತ್ರಗಳು ಹೊಂದಿರುವ ಬೃಹತ್ ಸಂಸ್ಥೆಯಾಗಿ ಬೆಳೆದಿರುವ ಸಮಯದಲ್ಲಿ ಕಾರ್ಮಿಕರನ್ನು ನಿರ್ಲಕ್ಷಿಸುತ್ತಿದೆ~ ಎಂದು ಬೇಸರ ವ್ಯಕ್ತಪಡಿಸಿದರು.

`5 ವರ್ಷಗಳಿಂದ ಕಾರ್ಮಿಕರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು, ಕಂಪೆನಿಯು ಉತ್ತರ ಭಾರತದಲ್ಲಿ ತನ್ನ ಶಾಖೆಗಳನ್ನು ವಿಸ್ತಾರ ಮಾಡುವುದರ ಮೂಲಕ ಸ್ವಯಂ ನಿವೃತ್ತಿ ಪಡೆಯುವ ಅನಿರ್ವಾತೆಯನ್ನು ಉಂಟು ಮಾಡುತ್ತಿದ್ದಾರೆ~ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವರ್ಕರ್ಸ್ ಯೂನಿಯನ್ ಜಂಟಿ ಕಾರ್ಯದರ್ಶಿ ಆರ್. ಡಿ.ಮೇಲ್ಕಿಯೋರ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.