ಹಿರಿಯ ಪತ್ರಕರ್ತ ಆರ್.ನರಸಿಂಹ ನಿಧನ

7

ಹಿರಿಯ ಪತ್ರಕರ್ತ ಆರ್.ನರಸಿಂಹ ನಿಧನ

Published:
Updated:

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಆರ್.ನರಸಿಂಹ (61) ಅವರು ಮಂಗಳವಾರ ಸಂಜೆ ನಿಧನರಾದರು.ಅವರು ಪತ್ನಿ, ಪುತ್ರ ಮತ್ತು ಪುತ್ರಿಯೊಬ್ಬರನ್ನು ಅಗಲಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಹತ್ತು ವರ್ಷಗಳಿಂದ ಅವರು ಪ್ರದೇಶ ಕಾಂಗ್ರೆಸ್ ಕಚೇರಿಯ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು.ರಾಮಕೃಷ್ಣ ಹೆಗಡೆ ನಗರದಲ್ಲಿ ನೆಲೆಸಿದ್ದ ಮೃತರ ಅಂತ್ಯಕ್ರಿಯೆ ಬುಧವಾರ ನೆರವೇರಲಿದೆ. ಕುಟುಂಬ ಸದಸ್ಯರ ಸಂಪರ್ಕಕ್ಕೆ- 9845444645.ಸಂತಾಪ: ನರಸಿಂಹ ಅವರ ನಿಧನಕ್ಕೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry