ಚಿಂತಾಮಣಿ: ತಾಲ್ಲೂಕಿನ ಹಿರೇಕಟ್ಟಿಗೇನಹಳ್ಳಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿ ₨ 16.70 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶನಿವಾರ ಶಾಸಕ ಎಂ.ಕೃಷ್ಣಾರೆಡ್ಡಿ ಚಾಲನೆ ನೀಡಿದರು.

‘ಅನೇಕ ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿರುವ ಹಿರೇಕಟ್ಟಿಗೇನಹಳ್ಳಿಯಲ್ಲಿ ಪಿಯು ಕಾಲೇಜು ಮತ್ತು ಪಶುವೈದ್ಯಕೀಯ ಆಸ್ಪತ್ರೆ ತೆರೆಯಲು ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಶೀಘ್ರ ಮಂಜೂರಾಗುವ ಭರವಸೆ ಇದೆ’ ಎಂದು ಕೃಷ್ಣಾರೆಡ್ಡಿ ಹೇಳಿದರು.

ಹಾಲು ಒಕ್ಕೂಟದ ನಿರ್ದೇಶಕ ಟಿ.ಎನ್.ರಾಜಗೋಪಾಲ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿದರು. ಎಪಿಎಂಸಿ ಸದಸ್ಯ ಸುಬ್ಬಾರೆಡ್ಡಿ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ರವೀಂದ್ರಗೌಡ, ತಾಲ್ಲೂಕು ಜೆಡಿಎಸ್ ಕಾರ್ಯದರ್ಶಿ ರಾಚಾಪುರ ಶ್ರೀನಿವಾಸ್, ನಗರಸಭೆ ಸದಸ್ಯರಾದ ಆರ್.ಪ್ರಕಾಶ್, ಮಂಜುನಾಥ್, ಮುಖಂಡರಾದ ದೊಡ್ಡಬೊಮ್ಮನಹಳ್ಳಿ ವೆಂಕಟರೆಡ್ಡಿ, ಮುನಿರಾಜು, ಹನುಮಂತಪ್ಪ, ರಾಮಣ್ಣ, ಮಂಜು, ದೊಡ್ಡಮುನಿವೆಂಕಟಪ್ಪ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.