ಗುರುವಾರ , ಏಪ್ರಿಲ್ 15, 2021
23 °C

ಹಿರೇಕೆರೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರೇಕೆರೂರ: ಕನಿಷ್ಠ 10 ಸಾವಿರ ರೂಪಾಯಿ ವೇತನ ನೀಡುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂಗೊಳಿಸಿ, ಕ್ರಮವಾಗಿ `ಸಿ~ ಮತ್ತು `ಡಿ~ ದರ್ಜೆಗೆ ನೇಮಕ ಮಾಡಿಕೊಳ್ಳಬೇಕು. ಮಾಸಿಕ ಕನಿಷ್ಠ ರೂ. 10 ಸಾವಿರ ವೇತನ ನೀಡಬೇಕು. ಸಮರ್ಪಕ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಹಾಸಿಗೆ ಮತ್ತು ಹೊದಿಕೆಗಳನ್ನು ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೊಡುವ ಗೌರವಧನವನ್ನು ಒಟ್ಟಾಗಿ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಫೆಡರೇಷನ್ ತಾಲ್ಲೂಕು ಘಟಕದ ಅಧ್ಯಕ್ಷೆ ನೀಲಮ್ಮ ವಾಲಿ, ಕಾರ್ಯದರ್ಶಿ ಪಾರ್ವತಮ್ಮ ಹಾದ್ರಿಹಳ್ಳಿ, ಸುನೀತಾ ಮರಕಳ್ಳಿ, ಮಮತಾಜ್‌ಬೇಗಂ ಮಾಸೂರು, ಎಐಟಿಯುಸಿ ಮುಖಂಡ ಹೊನ್ನಪ್ಪ ಮರಿಯಮ್ಮನವರ ಇತರರು ಪ್ರತಿಭಟನೆಯಲ್ಲಿದ್ದರು.ಪಟ್ಟಣದ ಪ್ರಮುಖ ಬೀದಿಯಲ್ಲಿ ಘೋಷಣೆ ಕೂಗುತ್ತಾ ಸಾಗಿದ ಸಹಸ್ರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮೆರವಣಿಗೆ ನಡೆಸಿದ ನಂತರ ತಹಶೀಲ್ದಾರ ಕಚೇರಿಗೆ ಆಗಮಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಶಿರಸ್ತೇದಾರ ಮಂಜುಳಾ ಹೆಗಡಾಳ ಮನವಿ ಸ್ವೀಕರಿಸಿದರು.ಬೆಂಬಲ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ರೈತ ಸಂಘದ ತಾಲ್ಲೂಕು ಘಟಕ (ಪ್ರೊ. ನಂಜುಂಡಸ್ವಾಮಿ ಬಣ) ಅಧ್ಯಕ್ಷ ರಾಜಶೇಖರ ದೂದಿಹಳ್ಳಿ, ನಗರ ಘಟಕದ ಅಧ್ಯಕ್ಷ ಬಸವರಾಜ ಚಿಂದಿ, ಮುಖಂಡರಾದ ಪೀರಪ್ಪ ಪೂಜಾರ, ಶಿವನಗೌಡ ಪಾಟೀಲ, ರಾಜು ಕೂಗೂರ, ಮಲ್ಲನಗೌಡ ಸೊರಟೂರ ಮೊದಲಾದವರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.