ಹಿರೇಮಠಗೆ ಪ್ರೆಸ್‌ಕ್ಲಬ್ `ವರ್ಷದ ವ್ಯಕ್ತಿ' ಪ್ರಶಸ್ತಿ

7

ಹಿರೇಮಠಗೆ ಪ್ರೆಸ್‌ಕ್ಲಬ್ `ವರ್ಷದ ವ್ಯಕ್ತಿ' ಪ್ರಶಸ್ತಿ

Published:
Updated:
ಹಿರೇಮಠಗೆ ಪ್ರೆಸ್‌ಕ್ಲಬ್ `ವರ್ಷದ ವ್ಯಕ್ತಿ' ಪ್ರಶಸ್ತಿ

ಬೆಂಗಳೂರು: `ಬೆಂಗಳೂರು ಪ್ರೆಸ್ ಕ್ಲಬ್'ನ 2012ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಧಾರವಾಡದ ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ಹಿರೇಮಠ ಆಯ್ಕೆಯಾಗಿದ್ದಾರೆ.ಹಿರಿಯ ಪತ್ರಕರ್ತರಾದ ನಾಗೇಶ್ ಹೆಗಡೆ, ಡಾ. ವಿಜಯಾ, ಅ.ಚ. ಶಿವಣ್ಣ ಹಾಗೂ ಹಿರಿಯ ಛಾಯಾಗ್ರಾಹಕ ಜಿ.ಎಸ್. ನಾರಾಯಣಸ್ವಾಮಿ ಪ್ರೆಸ್ ಕ್ಲಬ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಿ. 31ರ ಸಂಜೆ 6.30 ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪ್ರಶಸ್ತಿ ಪ್ರದಾನ ಮಾಡುವರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಇ.ವಿ.ಸತ್ಯನಾರಾಯಣ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry