ಕನೂರು: ಮಹಾತ್ವಾಕಾಂಕ್ಷಿ ಹಿರೇಹಳ್ಳ ಯೋಜನೆಯ ಹಿನ್ನೀರಿನಿಂದ ಮನೆ- ಮಠ ಕಳೆದುಕೊಂಡಿರುವ ಶಿರೂರ, ಮುತ್ತಾಳ, ವೀರಾಪೂರ ಹಾಗೂ ಮುದ್ಲಾಪುರ ಗ್ರಾಮಗಳ ಸಂತ್ರಸ್ತರಿಗೆ ಸರ್ಕಾರ ಪರಿಹಾರಧನ ಹಾಗೂ ನಿವೇಶನ ಹಕ್ಕುಪತ್ರಗಳನ್ನು ವಿತರಿಸಿ ಬಹುದಿನದ ಕನಸು ಈಡೇರಿಸಿದೆ ಎಂದು ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಸಂತಸ ವ್ಯಕ್ತಪಡಿಸಿದರು.

ಶಿರೂರ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಹಿರೇಹಳ್ಳ ಯೋಜನೆಯ ಸಂತ್ರಸ್ತರಿಗೆ ಪರಿಹಾರಧನ- ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನರ್ವವಸತಿ ಗ್ರಾಮಗಳಿಗೆ ಮೂಲ ಸೌಲಭ್ಯಕ್ಕಾಗಿ ರೂ25 ಕೋಟಿ ಸರ್ಕಾರ ನೀಡಿರುವುದು ನೆಮ್ಮದಿ ತಂದಿದೆ. ತುಂಗಭದ್ರಾ ನದಿಯಿಂದ ಯರೇಭಾಗದ 40 ಗ್ರಾಮಗಳಿಗೆ ರಾಜೀವ ಗಾಂಧಿ ಕುಡಿಯುವ ನೀರು ಯೋಜನೆಯಲ್ಲಿ ಸಾಕಷ್ಟು ಹಣ ಖರ್ಚು ಮಾಡಿದ್ದರೂ ವ್ಯರ್ಥವಾಗಿದೆ. ಪೂರಕವಾಗಿ ವಿಶೇಷ ಯೋಜನೆಯಲ್ಲಿ ಹಣ ನೀಡಬೇಕು. ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ಶಾಸಕ ಈಶಣ್ಣ ಗುಳಗಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿ ಸದಾನಂದಗೌಡ, ಗೋವಿಂದ ಕಾರಜೋಳ, ಶಿವರಾಮಗೌಡ, ಶಾಸಕರಾದ ಸಂಗಣ್ಣ ಕರಡಿ, ಪರಣ್ಣ ಮುನವಳ್ಳಿ, ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ರಾಜ್ಯ ಕರಕುಶಲ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ.ರಾದ ಈರಪ್ಪ ಕುಡಗುಂಟಿ, ಅಶೋಕ ತೋಟದ, ಉಮಾ ಮುತ್ತಾಳ ಮತ್ತಿತರರು ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.