ಕೃಷ್ಣರಾಜಪೇಟೆ: ಕೇಂದ್ರದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಕೆ. ರೆಹಮಾನ್ಖಾನ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸನ್ಮಾನ ಕಾರ್ಯಕ್ರಮವನ್ನು ನ.11ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ಬಿ.ಚಂದ್ರಶೇಖರ್ ತಿಳಿಸಿದರು.

ಸೋಮವಾರ ನಡೆದ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದ ದುರ್ಗಾಭವನ್ ವೃತ್ತದಲ್ಲಿ ಭಾನುವಾರ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಈ ವೇಳೆ ಪಕ್ಷದ ಇಬ್ಬರೂ ಹಿರಿಯ ಮುಖಂಡರನ್ನು ಸನ್ಮಾನಿಸಲಾಗುವುದು. ರಾಜ್ಯ ವಿಧಾನ ಸಭೆಗೆ ಅಕಾಲಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಕಾರ್ಯಕರ್ತರು ಬೇರು ಮಟ್ಟದಿಂದ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ತಾಲ್ಲೂಕಿನಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ಕೃಷ್ಣಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. 2ನೇ ಬ್ಲಾಕ್ ಅಧ್ಯಕ್ಷ ರುಕ್ಮಾಂಗದ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶೀಲಾ ಪಾಂಡುರಂಗೇ ಗೌಡ, ಆದಿಹಳ್ಳಿ ಮೀನಾಕ್ಷಿ, ತಾಲ್ಲೂಕು ಪಂಚಾಯಿತಿ ವಿಪಕ್ಷ ಮುಖಂಡ ರವೀಂದ್ರಬಾಬು, ಮುಖಂಡರಾದ ಪಾಪೇಗೌಡ, ಕೆ.ಬಿ.ಈಶ್ವರಪ್ರಸಾದ್ ಕೆ.ಎಸ್.ಬಸವೇಗೌಡ, ಕೋಡಿಮಾರನಹಳ್ಳಿ ದೇವರಾಜು, ಬಸ್ತಿ ರಂಗಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.