ಭಾನುವಾರ, ಮೇ 22, 2022
28 °C

ಹುತಾತ್ಮ ಪೊಲೀಸರಿಗೆ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ದೇಶಕ್ಕಾಗಿ ಕಾರ್ಯನಿರ್ವಹಿಸುವ ಸಮಯದಲ್ಲಿ ಮೃತರಾಗುವ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸುವುದು ಎಲ್ಲ ನಾಗರಿಕರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಪೋಲೀಸರು ಪ್ರಾಣದ ಹಂಗು ತೊರೆದು ಹೋರಾಡುತ್ತಾರೆ. ಈ ವರ್ಷ 634 ಪೊಲೀಸರು ಕರ್ತವ್ಯನಿರತರಾಗಿದ್ದಾಗ ಪ್ರಾಣತ್ಯಾಗ ಮಾಡಿದ್ದಾರೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ತ್ಯಾಗರಾಜನ್ ಹುತಾತ್ಮ ಪೊಲೀಸರ ಪಟ್ಟಿ ಓದಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಆರ್.ಭಗವಾನ್‌ದಾಸ್, ನ್ಯಾಯಾಧೀಶ ವೀರಣ್ಣ ಜಿ.ತಿಗಡಿ, ನಗರಸಭೆ ಅಧ್ಯಕ್ಷೆ ನಾಜಿಯಾ, ತಹಶೀಲ್ದಾರ್ ಡಾ.ದಯಾನಂದ್, ಲೋಕಾಯುಕ್ತ ಡಿವೈಎಸ್‌ಪಿ ನಾಗರಾಜ್, ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಶಾಂತಪ್ಪ, ಡಿವೈಎಸ್‌ಪಿ ರಾಜಣ್ಣ ಇತರರು ಹುತಾತ್ಮರಿಗೆ ನಮನ ಸಲ್ಲಿಸಿದರು.

ಸಶಸ್ತ್ರ ಮೀಸಲು ಪಡೆಯ ಇನ್ಸ್‌ಪೆಕ್ಟರ್ ನಾಗರಾಜ್ ನೇತೃತ್ವದ ತಂಡ ಪಥ ಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.