ಹುತಾತ್ಮ ಯೋಧರಿಗೆ ನಮನ

ಬೆಂಗಳೂರು: ‘ದೇಶದ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡುವ ಯೋಧರನ್ನು ಸ್ಮರಿಸಬೇಕಾದುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ’ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದರು.
ನಗರದ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನದಲ್ಲಿ ಗುರುವಾರ ನಡೆದ ‘ವಿಜಯ ದಿವಸ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಹಳಷ್ಟು ಸಾರಿ ಯೋಧರ ಬಲಿದಾನವನ್ನು ನಿರ್ಲಕ್ಷಿಸಲಾಗುತ್ತದೆ. ಅವರನ್ನೇ ನಂಬಿದ ಕುಟುಂಬದವರ ಬದುಕು ತೀರ ಕಷ್ಟದಾಯಕವಾಗುತ್ತದೆ. ಇಂತಹವರಿಗೆ ಸಹಾಯ ಮಾಡಲು ಮುಂದೆ ಬರುವ ದಾನಿಗಳು ಹಾಗೂ ಯೋಧರ ಕುಟುಂಬದ ನಡುವೆ ಫ್ಲ್ಯಾಗ್ಸ್ ಆಫ್ ಆನರ್ ಸಂಘಟನೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.
ಇದೇ ಸಂದರ್ಭದಲ್ಲಿ ಹುತಾತ್ಮರಾದ ರಾಜ್ಯದ ಯೋಧರ ಕುಟುಂಬಗಳಿಗೆ ರೂ 1 ಲಕ್ಷ ಪರಿಹಾರ ಧನದ ಚೆಕ್ ಅನ್ನು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ವಿತರಿಸಿದರು. ಛತ್ತೀಸ್‌ಗಡದಲ್ಲಿ ನಕ್ಸಲೀಯರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಬಿಎಸ್‌ಎಫ್ ಯೋಧ ಭೀಮಾ ಶಂಕರ ಹಡಪದ, ಜಮ್ಮು ಹಾಗೂ ಕಾಶ್ಮೀರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಯೋಧ ಕೆ.ಎಸ್. ರವೀಂದ್ರ ಮತ್ತು ಸಪ್ಪೆರ್ ಫಿಲೊಮಿನಾ ರಾಜ್ ಅವರ ಕುಟುಂಬಗಳಿಗೆ ತಲಾ ರೂ 1 ಲಕ್ಷ ಚೆಕ್ ವಿತರಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.