ಶುಕ್ರವಾರ, ಮೇ 7, 2021
26 °C

ಹುದ್ದೆಗಳ ನೇಮಕಾತಿ ಎಂದು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈಗಾಗಲೇ 1.45 ಲಕ್ಷ ಹುದ್ದೆಗಳು ಖಾಲಿಯಿದ್ದರೂ, ನೇಮಕಾತಿ ಪ್ರಕ್ರಿಯೆಯ ಚಾಲನೆ ಮಾತ್ರ ಮರೀಚಿಕೆಯಾಗಿದೆ.  ಬಿ.ಎ., ಬಿ.ಇಡಿ, ಎಂ.ಎ. ಮತ್ತು ಇತರೆ ಪದವಿ ಪಡೆದ ಲಕ್ಷಾಂತರ ನಿರುದ್ಯೋಗ ಯುವಕ - ಯುವತಿಯರ ಸಂಖ್ಯೆ ಅಧಿಕಗೊಂಡಿದ್ದು, ಭವಿಷ್ಯ ಕಂಡುಕೊಳ್ಳಲು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕಳೆದ ವರ್ಷ ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇತರೆ ನೇಮಕಾತಿಗಳು ಶೂನ್ಯವಾಗಿದೆ. 

 

ಅಲ್ಲದೇ ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಶಿಕ್ಷಕರ ನೇಮಕಾತಿಯು ಕಾರಣಾಂತರಗಳಿಂದ ತಟಸ್ಥಗೊಂಡಿದೇ ಕಾರಣ. ಸರ್ಕಾರ ಸದ್ಯ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಆದಷ್ಟು ಶೀಘ್ರವಾಗಿ ನೇಮಕಾತಿ ಆರಂಭಿಸಲು ಆಯಾ ಇಲಾಖೆಗಳಿಗೆ ಸೂಚನೆ ನೀಡಿ, ಉದ್ಯೋಗ ಆಕಾಂಕ್ಷಿಗಳ ಬದುಕಿಗೆ ದಾರಿದೀಪವಂತಾಗಬೇಕು. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.