ಭಾನುವಾರ, ಮೇ 22, 2022
21 °C

ಹುದ್ದೆ ಕಾಯಂಗೆ ಆಗ್ರಹಿಸಿ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಅಖಿಲಭಾರತ ಐಎನ್‌ಜಿ ವೈಶ್ಯ ಬ್ಯಾಂಕ್ ಉದ್ಯೋಗಿಗಳ ಸಂಘ, ಅಧಿಕಾರಿಗಳ ಸಂಘದ ಆಶ್ರಯದಲ್ಲಿ ಬ್ಯಾಂಕ್ ನೌಕರರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಯಿತು.ನಗರದ ಮಂಡಿಪೇಟೆಯ ಬ್ಯಾಂಕ್ ಮುಂಭಾಗ ಸೇರಿದ ಉದ್ಯೋಗಿಗಳು ಸಿಬ್ಬಂದಿ ನೇಮಕಾತಿಯನ್ನು ಕಾಯಂಗೊಳಿಸಬೇಕು. ಅವರಿಗೆ ಸೇವಾ ಕಾಯ್ದೆ ನಿಯಮ ವಿಸ್ತರಿಸಬೇಕು. ಗುತ್ತಿಗೆ ಆಧರಿತ ನೇಮಕಾತಿ ಮತ್ತು ಹೊರಗುತ್ತಿಗೆ ಪದ್ಧತಿಯನ್ನು ನಿಲ್ಲಿಸಬೇಕು.ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಬೇಕು. ಅರೆ ಸೇವಾವಧಿ ನೌಕರರನ್ನು ಕಳೆದ ವರ್ಷ ಮೇ 1ರಿಂದ ಪೂರ್ವಾನ್ವಯವಾಗುವಂತೆ ಬ್ಯಾಂಕಿನ ಸಿಬ್ಬಂದಿಯಾಗಿ ಪರಿಗಣಿಸಬೇಕು. ಸಿಬ್ಬಂದಿಗಳ ಶೊಷಣೆ ನಿಲ್ಲಬೇಕು ಎಂದು ಆಗ್ರಹಿಸಿದರು.ಈ ಬೇಡಿಕೆ ಈಡೇರಿಕೆಗಾಗಿ ಮಾರ್ಚ್ 17ರಂದು ಅಖಿಲ ಭಾರತಮಟ್ಟದಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಈ ಮತ ಪ್ರದರ್ಶನ ನಡೆಸಲಾಗುತ್ತಿದೆ ಎಂದು ತಿಳಿಸಿದರು.ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ನ್ಯಾಮತಿ, ಕಾರ್ಯದರ್ಶಿ ರಾಘವೇಂದ್ರ ನಾಯರಿ, ವೈಶ್ಯ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ದತ್ತಾತ್ರಿ ನೀಲಗಿರಿ, ಐಎನ್‌ಜಿ ವೈಶ್ಯ ಬ್ಯಾಂಕ್ ಅಧಿಕಾರಿಗಳ ಸಂಘದ ಸ್ಥಳೀಯ ಕಾರ್ಯದರ್ಶಿ ನಾಗರಾಜ್, ಮಂಜುನಾಥ್, ಸುಖದಾ, ಶಾಲಿನಿ, ರೂಪಾ ಇತರರು ಭಾಗವಹಿಸಿದ್ದರು.ದೈಹಿಕ ಶಿಕ್ಷಕರ ಕಾರ್ಯಾಗಾರ

ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾಮಟ್ಟದ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ ಮಾರ್ಚ್ 16 ಮತ್ತು 17ರಂದು ನಗರದ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.ಈ ಕಾರ್ಯಾಗಾರಕ್ಕೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ದೈಹಿಕ ಶಿಕ್ಷಕರು ಕಡ್ಡಾಯವಾಗಿ ಭಾಗವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅನುಮತಿ ನೀಡಿದ್ದಾರೆ. ದೈಹಿಕ ಶಿಕ್ಷಕರು ಭಾಗವಹಿಸಬೇಕು ಎಂದು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ (ಉತ್ತರ ವಲಯ) ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.