ಹುಬ್ಬಳ್ಳಿ ವಿಮಾನ ಪ್ರಯಾಣಿಕರ ಮಾಹಿತಿ ಸಂಗ್ರಹಕ್ಕೆ ಸೂಚನೆ

ಭಾನುವಾರ, ಮೇ 19, 2019
33 °C

ಹುಬ್ಬಳ್ಳಿ ವಿಮಾನ ಪ್ರಯಾಣಿಕರ ಮಾಹಿತಿ ಸಂಗ್ರಹಕ್ಕೆ ಸೂಚನೆ

Published:
Updated:

ಇಂಡಿ: ಭಯೋತ್ಪಾದಕರ ಬೆದರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳು, ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲು ಆದೇಶಿಸಲಾಗಿದೆ. ಜತೆಗೆ ಸೈಬರ್ ಅಪರಾಧ ತಡೆಗೆ ಪರಿಣಿತ ಎಂಜಿನಿಯರುಗಳ ಸೇವೆಯನ್ನೂ ಪಡೆಯಲಾಗುತ್ತಿದೆ ಎಂದು ಗೃಹ ಮತ್ತು ಸಾರಿಗೆ ಖಾತೆ ಸಚಿವ ಆರ್.ಅಶೋಕ ಹೇಳಿದರು.ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಹರಿಸಿ ದುಷ್ಕೃತ್ಯವೆಸಗುವ ಭಯೋತ್ಪಾದಕರ ಕೃತ್ಯದ ಬಗ್ಗೆ ವಾರದ ಹಿಂದೆಯೇ ಮಾಹಿತಿ ಬಂದಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಕಳೆದ ಮೂರು ತಿಂಗಳ ಅವಧಿಯಲ್ಲಿ ಪ್ರಯಾಣಿಸಿರುವ ಹಾಗೂ ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರ ಮಾಹಿತಿಯನ್ನು ಪರಿಶೀಲಿಸಲು ಆದೇಶ ನೀಡಲಾಗಿದೆ ಎಂದು ಇಂಡಿಯಲ್ಲಿ ನಡೆದ ಸಮಾರಂಭದಲ್ಲಿ ತಿಳಿಸಿದರು.ಮಂಗಳೂರು, ಕಾರವಾರ ಸೇರಿದಂತೆ 300 ಕಿ.ಮೀ ಉದ್ದದ ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry