ಗುರುವಾರ , ಜೂನ್ 24, 2021
28 °C

ಹುಬ್ಬಳ್ಳಿ: 11ರಂದು ಬಿಎಸ್‌ವೈ ಅಭಿನಂದನಾ ಸಮಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನಾ ಸಮಾರಂಭ ಇದೇ 11ರಂದು ಮಧ್ಯಾಹ್ನ 3 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.ಈ ಸಂಬಂಧ ನಗರದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ನಂತರ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿದ್ದ ಮೂರೂವರೆ ವರ್ಷಗಳ ಅವಧಿಯಲ್ಲಿ ಯಡಿಯೂರಪ್ಪ ಅವರು ಮಾಡಿರುವ ಸಾಧನೆಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಹೇಳಿದರು.`ಬೆಂಗಳೂರಿನಲ್ಲಿ ನಡೆದ ಯಡಿಯೂರಪ್ಪ ಅವರ 70ನೇ ಜನ್ಮದಿನದ ಸಮಾರಂಭದಲ್ಲಿ ಉತ್ತರ ಕರ್ನಾಟಕದ ಎಲ್ಲ ಕಾರ್ಯಕರ್ತರಿಗೆ ಭಾಗವಹಿಸಲು ಆಗಿರಲಿಲ್ಲ. ಇದಕ್ಕಾಗಿ ಈ ಭಾಗದ ಎಲ್ಲ ಜಿಲ್ಲೆಗಳಿಂದ ಸುಮಾರು 2 ಲಕ್ಷ ಕಾರ್ಯಕರ್ತರು 11ರಂದು ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಮುಖ್ಯಮಂತ್ರಿ ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರನ್ನು ಆಹ್ವಾನಿಸಲಾಗಿದೆ~ ಎಂದು ಅವರು ಹೇಳಿದರು.`ಸಚಿವರು ಅಶ್ಲೀಲ ಚಿತ್ರ ವೀಕ್ಷಿಸಿಲ್ಲ~

ಹುಬ್ಬಳ್ಳಿ:
`ವಿಧಾನಸಭೆಯಲ್ಲಿ ಮೂವರು ಸಚಿವರು ಅಶ್ಲೀಲ ಚಿತ್ರವನ್ನು ವೀಕ್ಷಿಸಿಲ್ಲ. ಸದನದ ಸಿಸಿ ಟಿವಿ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದನ್ನು ವೀಕ್ಷಿಸಲಾಗಿ, ಅವರು ಮೊಬೈಲ್ ಆಪರೇಟ್ ಮಾಡಿದ್ದಾರೆ ಅಷ್ಟೆ~ ಎಂದು ಪ್ರಕರಣದ ತನಿಖೆಗಾಗಿ ನೇಮಿಸಲಾಗಿರುವ ಸದನ ಸಮಿತಿ ಅಧ್ಯಕ್ಷ ಶ್ರೀಶೈಲಪ್ಪ ಬಿದರೂರ ಹೇಳಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸುವ ಸಮಾರಂಭಕ್ಕೆ ಸಂಬಂಧಿಸಿ ನಗರದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.`ವಿಧಾನಸಭೆಯಲ್ಲಿ ಅನೇಕ ಸಚಿವರು ಹಾಗೂ ಶಾಸಕರು ಮೊಬೈಲ್ ಆಪರೇಟ್ ಮಾಡುತ್ತಾರೆ. ಆದರೆ ಆ ಮೊಬೈಲಿನಲ್ಲಿ ಏನಿದೆ, ಯಾವ ಚಿತ್ರವಿದೆ ಎಂದು ಗಮನಿಸುವುದಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಹೇಳಲಾರೆ~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.