ಹುಲಿ ಯೋಜನೆಗೆ ರೈತರ ಬಲಿ

7

ಹುಲಿ ಯೋಜನೆಗೆ ರೈತರ ಬಲಿ

Published:
Updated:

ಹುಲಿ ಸಂರಕ್ಷಣಾ ಯೋಜನೆಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದ ವನ್ಯಜೀವಿ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಿ ಒಪ್ಪಿಗೆ  ಪಡೆಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹುಲಿ ಸಂರಕ್ಷಣಾ ಯೋಜನೆಯು ಸಂಪೂರ್ಣವಾಗಿ ಕೇಂದ್ರ ಸರ್ಕಾರದ  ಯೋಜನೆ ಇದಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಒಂದು ಹೇಳುತ್ತ ಜನರನ್ನು ದಾರಿ ತಪ್ಪಿಸುವ ಪ್ರಯತ್ನಗಳೂ ನಡೆಯುತ್ತಿವೆ. ಈ ವಿಷಯದಲ್ಲಿ ಕೆಲವು ರಾಜಕೀಯ ಪಕ್ಷಗಳೂ ಕೈಜೋಡಿಸಿವೆ. ಈ ಬೆಳವಣಿಗೆ ದುರದೃಷ್ಟಕರ.ಹುಲಿ ಯೋಜನೆಯನ್ನು ಯಾವ ಸರ್ಕಾರ ಜಾರಿಗೆ ತಂದರೂ ಅದರಿಂದ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಮತ್ತು ಲಕ್ಕವಳ್ಳಿ ಹೋಬಳಿಯ ಹಲವಾರು ಗ್ರಾಮಗಳಲ್ಲಿ ನೂರಾರು ವರ್ಷಗಳಿಂದ ಬೇಸಾಯವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ರೈತ ಕುಟುಂಬಗಳಿಗೆ ತೊಂದರೆಯಾಗಲಿದೆ.ಭದ್ರಾ ಮೇಲ್ದಂಡೆ ಯೋಜನೆಯಿಂದ ಈಗಾಗಲೇ ಸಾವಿರಾರು ರೈತರು ಅತಂತ್ರರಾಗಿದ್ದಾರೆ. ತರೀಕೆರೆ ತಾಲ್ಲೂಕಿನ ರೈತರು ಈಗ ಹುಲಿ ಯೋಜನೆಯಿಂದ ತೊಂದರೆಗೆ ಒಳಗಾಗಲಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನ ಜನರ ಪರವಾಗಿ ರಾಜಕೀಯ ಪಕ್ಷಗಳು ನಿಲ್ಲಬೇಕು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry