ಗುರುವಾರ , ಮೇ 19, 2022
21 °C

ಹೂಡಿಕೆದಾರರ ಆಕರ್ಷಣೆ: ರಾಜ್ಯ ಮಾದರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಪ್ರವಾಸೋದ್ಯಮ ಎಂದರೆ ಉದ್ಯೋಗ ಎಂದರ್ಥ. ಈ ಉದ್ಯಮದಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ~ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಸುಬೋಧ್ ಕಾಂತ್ ಸಹಾಯ್ ಹೇಳಿದರು.ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, `ಹೂಡಿಕೆದಾರರನ್ನು ಆಕರ್ಷಿಸುವಲ್ಲಿ ಕರ್ನಾಟಕ, ಇತರ ರಾಜ್ಯಗಳಿಗೆ ಮಾದರಿಯಾಗಿದೆ~ ಎಂದರು.

`ದೇಶದಲ್ಲಿ 2 ಲಕ್ಷ ಪ್ರವಾಸಿ ಹೋಟೆಲ್ ಕೊಠಡಿಗಳ ಕೊರತೆ ಇದೆ.2016ರ ವೇಳೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 30 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ~ ಎಂದು ಅವರು ತಿಳಿಸಿದರು.`ಡಿಸ್ನಿಲ್ಯಾಂಡ್ ರೀತಿಯ ಥೀಮ್ ಪಾರ್ಕ್‌ಗಳನ್ನು ದೇಶದಲ್ಲೂ ಸ್ಥಾಪಿಸಬೇಕಾಗಿದೆ. ಅಂತಹ ಪಾರ್ಕ್‌ಗಳು ಪ್ರವಾಸಿಗರನ್ನು ಆಕರ್ಷಿಸಲಿವೆ~ ಎಂದು ಅವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.