ಮಂಗಳವಾರ, ಏಪ್ರಿಲ್ 20, 2021
32 °C

ಹೂಡಿ ವಾರ್ಡ್ ಟ್ರಾನ್ಸ್‌ಫಾರ್ಮರ್ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹದೇವಪುರ:  ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ಮುಕ್ತವಾಗಿ ಬೆರೆತು ಕಷ್ಟ-ಸುಖಗಳಿಗೆ ಸ್ಪಂದಿಸುವುದನ್ನು ರೂಢಿಸಿಕೊಂಡಲ್ಲಿ ಮಾತ್ರ ಉತ್ತಮ ರಾಜಕಾರಣಿಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ಪಾಲಿಕೆ ಸದಸ್ಯ ಬಿ.ಎ.ಬಸವರಾಜು ಅಭಿಪ್ರಾಯಪಟ್ಟರು.

 

ಸಮೀಪದ ಹೂಡಿ ವಾರ್ಡ್ ವ್ಯಾಪ್ತಿಯ ಅಯ್ಯಪ್ಪ ನಗರದಲ್ಲಿ ಇತ್ತೀಚೆಗೆ ನೂತನವಾಗಿ ಅಳವಡಿಸಲಾದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆ ಬಂದಾಗ ಮಾತ್ರ ರಾಜಕಾರಣಿಗಳು ಜನರೊಂದಿಗೆ ಬೆರೆಯುವುದು ಸಾಮಾನ್ಯ. ನಂತರದ ದಿನಗಳಲ್ಲಿ ಇದು ಕಾಣೆಯಾಗುತ್ತದೆ ಎಂದರು. ಅಯ್ಯಪ್ಪ ನಗರ ಗೆಳೆಯರ ಬಳಗದ ಬಾಲಕೃಷ್ಣಗೌಡ, ನಾಗರಾಜು, ಅನಂತ ನಾಯ್ಕ, ಕಾವೇರಪ್ಪ, ಜಯಕುಮಾರ, ರಾಮಕೃಷ್ಣ, ಅನಂತ ನಾಯಕ, ಚಂದ್ರ ಹಾಗೂ ಪದ್ಮನಾಭ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.