ಸೋಮವಾರ, ಮೇ 23, 2022
20 °C

ಹೃತಿಕ್‌ಗೆ ಮೆದುಳು ಶಸ್ತ್ರಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ) : ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಬಾಲಿವುಡ್ ನಟ ಹೃತಿಕ್ ರೋಶನ್ ಅವರಿಗೆ ನಗರದ ಹಿಂದುಜಾ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆ ನಡೆಸಲಾಯಿತು.`ಮೆದುಳು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಹೃತಿಕ್ ಆರೋಗ್ಯವಾಗಿದ್ದಾನೆ. ಇನ್ನು 48 ಗಂಟೆಗಳೊಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾನೆ' ಎಂದು ಅವರ ತಂದೆ ನಿರ್ದೇಶಕ ರಾಕೇಶ್ ರೋಶನ್ ತಿಳಿಸಿದ್ದಾರೆ.

ಹೃತಿಕ್ ಸಬ್‌ಡ್ಯುರಾಲ್ ಹೆಮಟೋಮಾ ಎಂಬ ಮೆದುಳು ಸಂಬಂಧಿತ ಖಾಯಿಲೆಯಿಂದಾಗಿ ಬಳಲುತ್ತಿದ್ದ ಹೃತಿಕ್ ರೋಶನ್, ಶಸ್ತ್ರಚಿಕಿತ್ಸೆ ಸಲುವಾಗಿ ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.