ಶಿರಸಿ: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೌಲ್ಯಾಧಾರಿತ ರಾಜಕಾರಣಿಯಾಗಿದ್ದು, ನಿರಹಂಕಾರಿಯಾಗಿದ್ದರು ಎಂದು ಲೇಖಕ ಜಯಪ್ರಕಾಶ ಮಾವಿನಕುಳಿ ಅವರು ಹೇಳಿದರು.

ಅವರು ನಗರದ ಕೇಶವೈನ್ ಸಭಾಭವನದಲ್ಲಿ ಅಭಿಮಾನ ಸಾಂಸ್ಕೃತಿಕ ವೇದಿಕೆ ಇತ್ತೀಚೆಗೆ ಆಯೋಜಿಸಿದ್ದ ರಾಮಕೃಷ್ಣ ಹೆಗಡೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ರಾಜಕಾರಣ ಅವಲೋಕಿಸಿದರೆ ರಾಮಕೃಷ್ಣ ಹೆಗಡೆ ಆದರ್ಶಪ್ರಾಯರಾಗಿ ಕಾಣುತ್ತಾರೆ. ತಮ್ಮ ಆಡಳಿತ ಅವಧಿಯಲ್ಲಿ ಮಿಥ್ಯ ಆರೋಪ ಮಾಡಿದರೂ ಆತ್ಮಸಾಕ್ಷಿಗೆ ಬೆಲೆಕೊಟ್ಟು ಜನಾದೇಶ ಪಡೆದವರು ಹೆಗಡೆ ಎಂದರು.

ಈ ಸಂದರ್ಭದಲ್ಲಿ ರಂಗ ಕಲಾವಿದ ರಾಮಚಂದ್ರ ಹೆಗಡೆ ಅವರನ್ನು ಸನ್ಮಾನಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಗಣೇಶ ಭಟ್ಟ ಉಪ್ಪೋಣಿ ಅಧ್ಯಕ್ಷತೆ ವಹಿಸಿದ್ದರು. ಜಯಪ್ರಕಾಶ ಮಾವಿನಕುಳಿ ಸಂಗ್ರಹಿಸಿದ `ನಮ್ಮ ಪ್ರೀತಿಯ ರಾಮಕೃಷ್ಣ ಹೆಗಡೆ~ ಕೃತಿಯನ್ನು ಮಾರಿಗುಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಎನ್.ಹೊಸ್ಮನಿ ಬಿಡುಗಡೆಗೊಳಿಸಿದರು. ಲೇಖಕಿ ಭಾಗೀರಥಿ ಹೆಗಡೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವಿತ್ರಿ ಹೆಗಡೆ, ಸಂಘಟಕ ವಿ.ಎನ್.ಭಾಗ್ವತ ಬರಬಳ್ಳಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.