ಮಂಗಳವಾರ, ಜೂನ್ 15, 2021
21 °C

ಹೆಚ್ಚವರಿ ವೆಚ್ಚ: ಪೂರಕ ಅಂದಾಜು ಮಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2011-12ನೇ ಸಾಲಿನ ಮೂರನೇ ಹಾಗೂ ಅಂತಿಮ ಕಂತಿನ 6,177 ಕೋಟಿ ರೂಪಾಯಿಗಳ ಪೂರಕ ಅಂದಾಜುಗಳನ್ನು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದರು.ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಕ್ಕಿಂತ ಹೆಚ್ಚುವರಿ ವೆಚ್ಚಗಳಿಗೆ ಹಣ ಒದಗಿಸಿದ್ದು, ಅದಕ್ಕೆ ವಿಧಾನಸಭೆಯ ಒಪ್ಪಿಗೆ ಪಡೆಯಬೇಕಾಗಿದೆ. ಹೀಗಾಗಿ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ನೀಡಲು 37.32 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಮಂಜೂರು ಮಾಡಿರುವುದನ್ನೂ ಪೂರಕ ಅಂದಾಜುಗಳಲ್ಲಿ ಸೇರಿಸಲಾಗಿದೆ.ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರ ವೈದ್ಯಕೀಯ ವೆಚ್ಚದ ಮರುಪಾವತಿಗಾಗಿ ರೂ 28.06 ಲಕ್ಷ ಹಾಗೂ ಹೈಕೋರ್ಟ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿಯ ವೈದ್ಯಕೀಯ ವೆಚ್ಚದ ಮರುಪಾವತಿಗೆ 39.64 ಲಕ್ಷ ರೂಪಾಯಿ ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿದೆ.ಪಿಂಚಣಿ ಯೋಜನೆಯ ವೆಚ್ಚಕ್ಕಾಗಿ ರಾಜ್ಯದ ಪಾಲಿನ 50 ಕೋಟಿ ರೂಪಾಯಿ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.