ಶುಕ್ರವಾರ, ಜೂನ್ 18, 2021
23 °C

ಹೆಚ್ಚಾಗುತ್ತಿರುವ ದೇಶಾಭಿಮಾನ: ಕಲಾಂ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವಿದ್ಯಾರ್ಥಿಗಳ ಮನೋಭಾವ ಬದಲಾ ಗುತ್ತಿದ್ದು, ರಾಷ್ಟ್ರ ಸೇವೆ ಮಾಡಬೇಕು ಎಂಬ ದೇಶಾಭಿಮಾನ ಹೆಚ್ಚಾಗುತ್ತಿದೆ ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಂತಸ ವ್ಯಕ್ತಪಡಿಸಿದರು.ಧಾರವಾಡದಲ್ಲಿ ಈಚೆಗೆ ನಡೆದ ಕಲಾಗುರು ಡಿ.ವಿ.ಹಾಲಭಾವಿ ಅವರ ಶತಮಾನೋತ್ಸವ ಹಾಗೂ ಜೆಎಸ್‌ಎಸ್ ಹಾಲಭಾವಿ ಸ್ಕೂಲ್ ಆಫ್ ಆರ್ಟ್‌ನ ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಳೆದ ಒಂದು ವರ್ಷದಿಂದ ವಿದ್ಯಾರ್ಥಿಗಳ ಮನೋಭಾವದಲ್ಲಿ ಬದಲಾವಣೆ ಕಂಡುಬರುತ್ತಿ ರುವುದು ಸ್ಪಷ್ಟವಾಗುತ್ತಿದೆ. ದೇಶಕ್ಕಾಗಿ ನಾವೇನು ಮಾಡಬೇಕು, ಭಾರತದ ಯಶೋಗಾಥೆ ಹಾಡುವುದು ಯಾವಾಗ ಎಂದು ಅನೇಕು ಕೇಳುತ್ತಿದ್ದಾರೆ. ಇದರಿಂದ ಸಂತಸವಾಗುತ್ತಿದ್ದು, ಸಾಮೂಹಿಕ ಪ್ರಯತ್ನದಿಂದ ಭಾರತ 2020ರ ವೇಳೆಗೆ ಸರ್ವಾಂಗೀಣ ಅಭಿವೃದ್ಧಿ ಹೊಂದಲಿದೆ ಎಂದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಜಗದೀಶ್ ಶೆಟ್ಟರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸಿದ್ಧೇಶ್ವರ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಣ್ಣ ನೀರಾವರಿ ಸಚಿವ ಬಸವರಾಜ ಎಸ್.ಬೊಮ್ಮಾಯಿ, ಶಾಸಕ ಚಂದ್ರಕಾಂತ ಜಿ.ಬೆಲ್ಲದ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.