ಹೆಚ್ಚಿನ ಅಧ್ಯಯನದಿಂದ ಮಾತ್ರ ಯಶಸ್ಸು ಸಾಧ್ಯ

ಬೆಂಗಳೂರು: ‘ವಿದ್ಯಾರ್ಥಿಗಳು ಉದ್ಯೋಗದ ಜೊತೆಗೆ ಆಸಕ್ತಿಯ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ನಡೆಸಿದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ’ ಎಂದು ನಾರ್ವೆಸ್ಟ್ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಮೋಹನ್ ಕುಮಾರ್ ಹೇಳಿದರು.
ನಗರದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 11ನೇ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
‘ಯುವ ಎಂಜಿನಿಯರ್ಗಳು ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಆಸಕ್ತಿಯ ಕ್ಷೇತ್ರ ಗುರುತಿಸಿಕೊಂಡು ಉನ್ನತ ಸಾಧನೆ ಮಾಡಬೇಕು’ ಎಂದರು.
ಪ್ರಸ್ತುತ ಎಂಜಿನಿಯರಿಂಗ್್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೊಸ ಸಂಸ್ಥೆ ಸ್ಥಾಪಿಸುವ ಮೂಲಕ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದರು.
ಪದವಿ ಸ್ವೀಕರಿಸಿ ರಮ್ಯಶ್ರೀ ಮಾತನಾಡಿ, ಪದವಿ ಸ್ವೀಕರಿಸುತ್ತಿರುವುದು ಖುಷಿ ತಂದಿದೆ. ಪೊಷಕರು, ಪ್ರಾಧ್ಯಾಪಕರ ಮಾರ್ಗದರ್ಶನದಿಂದ ರ್್ಯಾಂಕ್ ಪಡೆಯಲು ಸಾಧ್ಯವಾಯಿತು. ಮುಂದೆ ಉನ್ನತ ಅಧ್ಯಯನ ಕೈಗೊಳ್ಳುವ ಆಸೆ ಇದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ.ಸಂಜಯ್ ಚಟ್ನಿಸ್, ಸಿ.ಎಂ.ಆರ್. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ ಮತ್ತಿತರರು ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.