ಶನಿವಾರ, ಜೂನ್ 19, 2021
27 °C

ಹೆಚ್ಚಿನ ಮಾಹಿತಿಗೆ ಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 2ರಂದು ನಗರದ ಸಿವಿಲ್ ಕೋರ್ಟ್‌ನಲ್ಲಿ ವಕೀಲರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ನಡೆದಿರುವ ಜಟಾಪಟಿಯ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಅಡ್ವೊಕೇಟ್ ಜನರಲ್ (ಎ.ಜಿ) ಅವರಿಗೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ. ಆದರೆ ಈಗಾಗಲೇ ಸಿಐಡಿ (ಡಿಜಿಪಿ) ರೂಪಕ್‌ಕುಮಾರ್ ದತ್ತಾ ಅವರು ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರೇ ಅದನ್ನು ಮುಂದುವರಿಸಲಿ ಎನ್ನುವುದು ಸರ್ಕಾರದ ವಾದ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಮಾಹಿತಿ ಬಯಸಿದೆ.ಘಟನೆ ನಡೆದ ದಿನ `ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ~ ಎಂದು ತಪ್ಪು ಮಾಹಿತಿ ನೀಡಿದ ಟಿ.ವಿ. ಚಾನೆಲ್‌ಗಳ ವಿರುದ್ಧ ಇದುವರೆಗೆ ಕ್ರಮ ತೆಗೆದುಕೊಳ್ಳದ ಪೊಲೀಸರ ವಿರುದ್ಧವೂ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಇವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಬಗ್ಗೆಯೂ ಮಾಹಿತಿ ನೀಡುವಂತೆ ಎ.ಜಿ ಅವರಿಗೆ ಪೀಠ ಆದೇಶಿಸಿದೆ. ಘಟನೆ ನಡೆದ ದಿನದ ಚಿತ್ರೀಕರಣದ ಸಿ.ಡಿ.ಯನ್ನು ಕೋರ್ಟ್‌ಗೆ ಸಂಪಂಗಿ ವಿರುದ್ಧ ಮನವಿಎಲ್ಲ ಚಾನೆಲ್‌ಗಳು ನೀಡಿದವು. ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಯಿತು.

ಸಂಪಂಗಿ ವಿರುದ್ಧ ಮನವಿ

ಕ್ರಿಮಿನಲ್ ಪ್ರಕರಣವೊಂದನ್ನು ಇತ್ಯರ್ಥಪಡಿಸುವ ಸಂಬಂಧ ಉದ್ಯಮಿ ಹುಸೇನ್ ಮೊಯಿನ್ ಫಾರೂಕ್ ಅವರಿಂದ ಲಂಚ ಪಡೆದಿರುವ ಆರೋಪ ಹೊತ್ತ ಕೆಜಿಎಫ್ ಶಾಸಕ ವೈ.ಸಂಪಂಗಿಯವರಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಕೋರಿ ಫಾರೂಕ್ ಲೋಕಾಯುಕ್ತ ಕೋರ್ಟ್‌ಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.`ಇವರಿಗೆ ಕಳೆದ ಅಕ್ಟೋಬರ್‌ನಲ್ಲಿ ಜಾಮೀನು ನೀಡುವಾಗ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಲಾಗಿತ್ತು. ಆದರೆ ತಮಗೆ ಅವರು ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಕೆಜಿಎಫ್ ಪೊಲೀಸರಲ್ಲಿ ದೂರು ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ~ ಎಂದು ಫಾರೂಕ್ ದೂರಿದ್ದಾರೆ.  ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.