ಬೀದರ್: ಅನಾದಿ ಕಾಲದಿಂದಲೂ ಉತ್ತಮ ಸಾಂಸ್ಕೃತಿಕ ಪರಂಪರೆ ಹೊಂದಿರುವ ಭಾರತದಲ್ಲಿಯೇ ಇಂದು ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ವಿಷಾದಕರ ಸಂಗತಿ ಎಂದು ಕರ್ನಾಟಕ ಪಶು, ಪಶುವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಎಸ್.ಎಂ. ಶಿವಪ್ರಕಾಶ ತಿಳಿಸಿದರು.

ಶ್ರಾವಣ ಪ್ರಯುಕ್ತ ನಗರದ ಬಸವಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ‘ಸಾಮಾಜಿಕ ಮೌಲ್ಯಗಳು’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಸಂಕೇತವಾಗಿದೆ. ಇಂದಿನ ಯುವಜನರಲ್ಲಿ ಗುರು–ಹಿರಿಯರ ಬಗೆಗಿನ ಗೌರವ ಕಡಿಮೆಯಾಗುತ್ತಿದೆ. ಆದ್ದರಿಂದ ಅವರಿಗೆ ಸಾಮಾಜಿಕ ಮೌಲ್ಯಗಳನ್ನು ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ಆಧ್ಯಾತ್ಮಿಕ ಚಿಂತನೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯವಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ತಿಳಿಸಿದರು.ಹುಲಸೂರ ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಲಬುರ್ಗಿ ಅಕ್ಕಮಹಾದೇವಿ ಆಶ್ರಮದ ಪ್ರಭುಶ್ರೀ ತಾಯಿ ಅವರು ಅಕ್ಕಮಹಾದೇವಿ ಕುರಿತು ಆಶೀರ್ವಚನ ನೀಡಿದರು.

ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪಾ ಮಿಠಾರೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪಶು ಪಶುವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನ ನಿರ್ದೇಶಕ ಡಾ. ಶಿವಶಂಕರ ಉಸ್ತರ್ಗೆ, ಗುತ್ತಿಗೆದಾರ ಗುರನಾಥ ಕೊಳ್ಳೂರು, ಡಾ. ಎಸ್.ವಿ. ಜೂಜಾ, ಪ್ರಮುಖರಾದ ಪ್ರಭುರಾವ್ ವಸ್ಮತೆ ಇದ್ದರು.

ಸೋನಾಕ್ಷಿ ಪಾಟೀಲ, ಚನ್ನಬಸವ ನೌಬಾದೆ ಹಾಗೂ ವೈಜನಾಥ ಸಜ್ಜನಶೆಟ್ಟಿ ವಚನ ಗಾಯನ ಮಾಡಿದರು. ಯುವ ಬಸವ ಕೇಂದ್ರದ ಅಧ್ಯಕ್ಷ ಸುರೇಶ ಚನಶೆಟ್ಟಿ ಸ್ವಾಗತಿಸಿದರು. ಡಾ. ಬಸವರಾಜ ಬಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಚನ್ನಬಸವ ಹೆಡೆ ನಿರೂಪಿಸಿದರು. ಶಿವಕುಮಾರ ಸಾಲಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.