ಮಂಗಳವಾರ, ಏಪ್ರಿಲ್ 20, 2021
29 °C

ಹೆಚ್ಚುವರಿ ಬಸ್‌ಗೆ ಒತ್ತಾಯ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೃಂಗೇರಿ: ಬಾಳೆಹೊನ್ನೂರಿನಿಂದ ಶೃಂಗೇರಿಗೆ ಶಾಲಾ ಕಾಲೇಜಿನ ಸಮಯದಲ್ಲಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಬೆಳಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಎದುರು ಸುಮಾರು ಒಂದು ಗಂಟೆ ಕಾಲ ಸರ್ಕಾರಿ ಬಸ್ ತಡೆದು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಸಂಚಾಲಕ ರಂಜಿತ್ ಕಲ್ಕಟ್ಟೆ, ಬಾಳೆಹೊನ್ನೂರಿನಿಂದ ಶೃಂಗೇರಿಗೆ ಬೆಳಗಿನ ವೇಳೆ ಎರಡು ಸರ್ಕಾರಿ ಬಸ್‌ಗಳ ಸೌಲಭ್ಯ ಇದ್ದು ಸುಮಾರು 500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಪಾಸ್‌ಗಳನ್ನು ವಿತರಿಸಲಾಗಿದೆ. ಈ ಬಸ್ ಗಳಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ 200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಧಿಕ ಹಣ ಪಾವತಿಸಿ ಖಾಸಗಿ ಬಸ್‌ಗಳಿಗೆ ಬರುವಂತಾಗಿದೆ.

 

ನೂತನ ಬಸ್ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರೂ ಸಹ ಸಾರಿಗೆ ಸಂಸ್ಥೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ದಿನ ನಾವು ಸಾಂಕೇತಿಕವಾಗಿ ಬಸ್ ತಡೆ ಮಾಡಿದ್ದು, ಇದೇ 11ರ ಒಳಗಾಗಿ ನೂತನ ಬಸ್ ವ್ಯವಸ್ಥೆ ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾರಿಗೆ ಸಚಿವರ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಸಂಸ್ಥೆಯ ಸ್ಥಳೀಯ ನಿಯಂತ್ರಣಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಚರ್ಚಿಸಿ ಇದೇ  8ರ ಒಳಗಾಗಿ ನೂತನ ಬಸ್ ಸೌಕರ್ಯ ಕಲ್ಪಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.