ಶನಿವಾರ, ಮೇ 8, 2021
18 °C

`ಹೆಚ್ಚುವರಿ ವಿದ್ಯಾರ್ಥಿಗಳಿಗೂ ಊಟ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ: ತಾಲ್ಲೂಕಿನ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹೆಚ್ಚುವರಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗುವುದು, ಇದಕ್ಕಾಗಿ 4 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದರು.ಅವರು ಸೋಮವಾರ ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದ್ಲ್ಲಲಿ ಜರುಗಿದ ಹಣಕಾಸು ಲೆಕ್ಕ ಪರಿಶೋಧನಾ ಮತ್ತು ಯೋಜನಾ ಸಮಿತಿ ಸಭೆಯಲ್ಲಿ ಮಾತನಾಡಿದರು.ತಾಲ್ಲೂಕಿನ ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಮೂಲ  ಸೌಲಭ್ಯ ಹಾಗೂ ಇತರೆ ವೆಚ್ಚಗಳಿಗಾಗಿ ರೂ11 ಲಕ್ಷ ಮೀಸಲಿರಿಸಲು ಅಂದಾಜು ಯೋಜನೆ ಸಿದ್ಧಪಡಿಸಲಾಗಿದೆ ಎಂದರು.

ಅಂತರ್ಜಾತಿ ವಿವಾಹಗಳಿಗೆ ಈಗಾಗಲೇ ರೂ50 ಸಾವಿರ  ಪ್ರೋತ್ಸಾಹ ಧನವನ್ನಾಗಿ ಸರ್ಕಾರ ನೀಡುತ್ತಿತ್ತು, ಇದೀಗ ಅದನ್ನು ್ಙ1 ಲಕ್ಷದವರೆಗೆ ಹೆಚ್ಚಿಸಲು ನಿರ್ಧರಿಸಿದ್ದು, ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.ಪರಿಶಿಷ್ಟ ಜಾತಿ, ಪಂಗಡಗಳ 5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ250 ಶಿಷ್ಯವೇತನವನ್ನು, 8ರಿಂದ 10ನೇ ತರಗತಿಯವರೆಗೆ ವಾರ್ಷಿಕ ರೂ500 ಶಿಷ್ಯವೇತನವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಯ್ಲ್ಲಲಿ ಕಿಶೋರಿಯರ ಅಭಿವೃದ್ಧಿಗಾಗಿ 2.80 ಲಕ್ಷ ರೂ.ಗಳನ್ನು ಮೀಸಲಾಗಿರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.ಅಂಗನವಾಡಿ ಕೇಂದ್ರಗಳಿಗೆ ಪೌಷ್ಟಿಕ ಆಹಾರ, ಅಗತ್ಯ ಸಲಕರಣೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗಾಗಿ ರೂ7 ಲಕ್ಷ ಕಾಯ್ದಿರಿಸಲಾಗಿದೆ ಎಂದರು.ಕೃಷಿ ಮೇಳ ಮತ್ತು ಕೃಷಿ ವಸ್ತುಗಳ ಪ್ರದರ್ಶನವನ್ನು ಈ ಬಾರಿ ತಾಲ್ಲೂಕಿನ ಕಾನಾಹೊಸಹಳ್ಳಿ ಹೋಬಳಿಯ್ಲ್ಲಲಿ ನಡೆಸಲು ಸಭೆ ತೀರ್ಮಾನಿಸಿತು. ಇಲಾಖೆಯ ಯೋಜನೇತರ ವೆಚ್ಚ ರೂ3.42 ಲಕ್ಷ ಎಂದು ಅಂದಾಜು ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.ರೇಷ್ಮೆ ಇಲಾಖೆಯ ಯೋಜನೆಗಳಲ್ಲಿ ಹೊಸದಾಗಿ ರೇಷ್ಮೆ ಕೃಷಿ ಆರಂಭಿಸುವವರಿಗೆ ಪರಿಶಿಷ್ಟ ಜಾತಿ, ಪಂಗಡಗಳ ಫಲಾನುಭವಿ ರೈತರಿಗೆ ರೂ1.80 ಲಕ್ಷ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು. ರೇಷ್ಮೆ ಬೆಳೆ ಪ್ರತಿ ಕೆ.ಜಿಗೆ ಸರ್ಕಾರದ ವತಿಯಿಂದ ರೂ100 ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದೆ ಎಂದರು.ಹೊಸದಾಗಿ ತೋಟ ಮಾಡುವವರಿಗೆ ಪ್ರತಿಯೊಬ್ಬ ರೈತರಿಗೆ ತಲಾ 40 ಸಪೋಟಾ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ತಿಳಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳ ಆಯವ್ಯಯವನ್ನು ಮಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷೆ ಪ್ರಮೀಳಾ ಚಿದಾನಂದಗೌಡ ವಹಿಸಿದ್ದರು.ಸಾಮಾನ್ಯ ಸ್ಥಾಯಿ ಸಮಿತಿಯ ಸಭೆಯಲ್ಲಿ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು. ಸಮಿತಿಯ ಅಧ್ಯಕ್ಷ ಎನ್.ಪಿ.ಮಂಜುನಾಥ ಉಪಸ್ಥಿತರಿದ್ದರು.ಸಾಮಾಜಿಕ ನ್ಯಾಯ ಸಮಿತಿಯಲ್ಲಿ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿ ಅಧಿಕಾರಿಗಳು ಸಭೆಗೆ ನಿರಂತರವಾಗಿ ಗೈರು ಆಗುತ್ತಿದ್ದು, ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಿತಿಯ ಅಧ್ಯಕ್ಷೆ ವಿಶಾಲಾಕ್ಷಿ ರಾಜಣ್ಣ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.ವಿವಿಧ ಸಮಿತಿಗಳ ಸದಸ್ಯರು, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಹಜರತ್ ಷಾ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.