ಭಾನುವಾರ, ಏಪ್ರಿಲ್ 18, 2021
31 °C

ಹೆಚ್ಚುವರಿ ವಿದ್ಯುತ್: ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಈಗಾಗಲೇ, ಕೇಂದ್ರ ತನ್ನ ಪಾಲಿನ ವಿದ್ಯುತ್ ಪೂರೈಸಿದೆ. ಹೆಚ್ಚುವರಿಯಾಗಿ ವಿದ್ಯುತ್ ಸರಬರಾಜು ಮಾಡುವಂತೆ ರಾಜ್ಯ ಸರ್ಕಾರ ಬೇಡಿಕೆ ಸಲ್ಲಿಸಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ~ ಎಂದು ಕೇಂದ್ರ ಇಂಧನ ಮತ್ತು ಕಂಪೆನಿ ವ್ಯವಹಾರ ಸಚಿವ ಎಂ. ವೀರಪ್ಪ ಮೊಯಿಲಿ ತಿಳಿಸಿದರು.ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಗ್ರಂಥಾಲಯ ಕಟ್ಟಡದ ಉದ್ಘಾಟನೆಗೆ ಶನಿವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, `ದೇಶದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವ 2 ಕೋಟಿ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ.

 

ಹೀಗಾಗಿ, ಗ್ರಾಮೀಣ ಪ್ರದೇಶದಲ್ಲಿ ಜಲ ವಿದ್ಯುತ್, ಥರ್ಮಲ್ ಹಾಗೂ ಸೌರಶಕ್ತಿ ಬಳಸಿಕೊಂಡು 1 ಮೆಗಾವಾಟ್ ಸಾಮರ್ಥ್ಯದ ಉತ್ಪಾದನಾ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರಥಮ ಹಂತದಲ್ಲಿ ದೇಶದ 1,001 ಗ್ರಾಮಗಳಲ್ಲಿ ಈ ಮಾದರಿಯ ಘಟಕಗಳನ್ನು ಸ್ಥಾಪಿಸಲಾಗುವುದು~ ಎಂದು ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.