ಹೆಚ್ಚುವರಿ ಶುಲ್ಕ ವಾಪಸಿಗೆ ಸೂಚನೆ

7

ಹೆಚ್ಚುವರಿ ಶುಲ್ಕ ವಾಪಸಿಗೆ ಸೂಚನೆ

Published:
Updated:

ಬೆಂಗಳೂರು: ಸರ್ಕಾರ ನಿಗದಿ ಮಾಡಿರುವುದಕ್ಕಿಂತ ಹೆಚ್ಚಿನ ಶುಲ್ಕವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡಿರುವ ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳು ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ವಾಪಸ್ ನೀಡಬೇಕು ಎಂದು ಸರ್ಕಾರ ಸೂಚಿಸಿದೆ.ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಅವರು ಈ ಸಂಬಂಧ ಕಾಮೆಡ್-ಕೆ ಅಧಿಕಾರಿಗಳು ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ವೃತ್ತಿಶಿಕ್ಷಣ ಕಾಲೇಜುಗಳ ಸಂಘದ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, `ವೃತ್ತಿ ಶಿಕ್ಷಣ ಕಾಲೇಜುಗಳು ವಿದ್ಯಾರ್ಥಿಯೊಬ್ಬನಿಂದ ಪಠ್ಯೇತರ ಚಟುವಟಿಕೆಗೆ ಗರಿಷ್ಠ 15 ಸಾವಿರ ರೂಪಾಯಿ ಶುಲ್ಕ ಪಡೆಯಬಹುದು. ಅದಕ್ಕಿಂತ ಹೆಚ್ಚಿನ ಮೊತ್ತ ಪಡೆಯುವಂತೆ ಇಲ್ಲ~ ಎಂದು ತಿಳಿಸಿದರು.ಕೆಲವು ಕಾಲೇಜುಗಳು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕ ಪಡೆದಿವೆ. ಅಂಥ ಕಾಲೇಜುಗಳು ಹೆಚ್ಚುವರಿ ಮೊತ್ತವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕು ಎಂಬ ಸೂಚನೆ ನೀಡಲಾಗಿದೆ. ಹಿಂದಿರುಗಿಸದಿದ್ದರೆ ಅವುಗಳ ಮಾನ್ಯತೆ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ವಿ.ವಿ.ಗಳಿಗೆ ಮುಕ್ತ ಪ್ರವೇಶ: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಮುಕ್ತ ಪ್ರವೇಶ ಕಲ್ಪಿಸುವ ವ್ಯವಸ್ಥೆಯನ್ನು ಮುಂದಿನ ವರ್ಷದಿಂದ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.ರಾಜ್ಯದ ವಿವಿಧ ವಿ.ವಿ.ಗಳ ಕುಲಪತಿಗಳು ಹಾಗೂ ಕುಲಸಚಿವರ ಜೊತೆ ಶುಕ್ರವಾರ ನಡೆಸಿದ ಮಾತುಕತೆಯ ನಂತರ ಈ ನಿರ್ಧಾರ ಹೊರಬಿದ್ದಿದೆ. ಈ ನಿರ್ಧಾರದಿಂದ ವಿದ್ಯಾರ್ಥಿ- ಪ್ರಾಧ್ಯಾಪಕ ಅನುಪಾತದಲ್ಲಿನ ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂದು ರವಿ ಆಶಯ ವ್ಯಕ್ತಪಡಿಸಿದರು. ಬೆಂಗಳೂರು ವಿ.ವಿ.ಗೆ ಕುಲಪತಿಗಳ ನೇಮಕಕ್ಕೆ ಕಾಲಾವಕಾಶ ಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry