ಹೆಚ್ಚೆಚ್ಚು ಸಾವಯವ ಸಂತೆ: ಚಿಂತನೆ

7

ಹೆಚ್ಚೆಚ್ಚು ಸಾವಯವ ಸಂತೆ: ಚಿಂತನೆ

Published:
Updated:

ಬೆಂಗಳೂರು: `ರಾಜ್ಯದ ಎಲ್ಲ ಭಾಗಗಳಲ್ಲಿ ಸಾವಯವ ಸಂತೆ ಕಾರ್ಯಕ್ರಮವನ್ನು ಆಯೋಜಿಸಲು ಚಿಂತಿಸಲಾಗಿದೆ~ ಎಂದು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮ ಹೇಳಿದರು.

ಜೈವಿಕ ಕೃಷಿಕ್ ಸೊಸೈಟಿಯು ಲಾಲ್‌ಬಾಗ್‌ನಲ್ಲಿರುವ ಡಾ.ಎಂ.ಎಚ್. ಮರಿಗೌಡ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಸಾವಯವ ಸಂತೆ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.`ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಾವಯವ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಮುಂದೆ ಈ ಕಾರ್ಯಕ್ರಮವನ್ನು ಹೆಚ್ಚು ದಿನಗಳ ಕಾಲ ನಡೆಸಲು ಯೋಚಿಸಲಾಗಿದೆ~ ಎಂದರು.`ಸಾವಯವ ಆಹಾರ ಪದಾರ್ಥಗಳು, ಉತ್ಪನ್ನಗಳಿಗೆ ಸಾಕಷ್ಟು ಬೇಡಿಕೆಯಿದೆ. ಹಾಗಾಗಿ ಈ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಹಾಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ~ ಎಂದು ಹೇಳಿದರು.ಸೊಸೈಟಿಯ ಅಧ್ಯಕ್ಷರಾದ ತೋಟಗಾರಿಕೆ ಇಲಾಖೆಯ ಹೆಚ್ಚುವರಿ ನಿರ್ದೇಶಕ ಡಾ.ಕೆ. ರಾಮಕೃಷ್ಣಪ್ಪ, `ರಾಜ್ಯದಲ್ಲಿ ಒಟ್ಟು 20,000 ಹೆಕ್ಟೇರ್ ಪ್ರದೇಶದಲ್ಲಿ ಸಾವಯವ ಕೃಷಿ ನಡೆಯುತ್ತಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 72 ರೈತ ಸಂಘಗಳನ್ನು ಗುರುತಿಸಲಾಗಿದೆ. ರೈತರು ಬೆಳೆದ ಗುಣಮಟ್ಟದ ಸಾವಯವ ಉತ್ಪನ್ನವನ್ನು ನೋಂದಾಯಿತ ಸಂಘಗಳ ಮೂಲಕ ಗ್ರಾಹಕರಿಗೆ ತಲುಪುವಂತೆ ಮಾಡುವುದು ಇದರ ಉದ್ದೇಶ~ ಎಂದರು.`ಐದನೇ ಬಾರಿಗೆ ಬೆಂಗಳೂರಿನಲ್ಲಿ ಸಾವಯವ ಸಂತೆ ಆಯೋಜಿಸಲಾಗಿದೆ. ಈ ಬಾರಿ 50 ಟನ್‌ನಷ್ಟು ಆಹಾರ ಪದಾರ್ಥ, ಉತ್ಪನ್ನಗಳು ಮಾರಾಟವಾಗುವ ನಿರೀಕ್ಷೆ ಇದೆ. ಕಳೆದ ಬಾರಿಯ ಸಂತೆಗೆ 6,000 ಮಂದಿ ಭೇಟಿ ನೀಡಿದ್ದರು. ಈ ಬಾರಿ 10,000 ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ~ ಎಂದು ಮಾಹಿತಿ ನೀಡಿದರು.

ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 6.30ರವರೆಗೆ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry