ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಾನ ಹಕ್ಕು

7

ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಾನ ಹಕ್ಕು

Published:
Updated:

ನವದೆಹಲಿ, (ಪಿಟಿಐ): ಪಿತ್ರಾರ್ಜಿತ ಆಸ್ತಿ ಪಾಲುದಾರಿಕೆ ವಿವಾದ ಉಂಟಾದಾಗ ಹಿಂದೂ ಗಂಡು ಮಕ್ಕಳಿಗೆ ಆಸ್ತಿಯಲ್ಲಿ ಇರುವಷ್ಟೇ ಹಕ್ಕು ಹೆಣ್ಣು ಮಕ್ಕಳಿಗೂ ಇರುತ್ತದೆ. ಈ ನಿಯಮ 2005ರ ಸೆಪ್ಟೆಂಬರ್ ನಂತರದಿಂದ ಜಾರಿಯಲ್ಲಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

2005ರ ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಕಾಯ್ದೆ ತಿದ್ದುಪಡಿಯಾದ ನಂತರ ಹೆಣ್ಣು ಮಕ್ಕಳಿಗೆ ಆಸ್ತಿಯ ಪಾಲಿನಲ್ಲಿ ಸಮಾನ ಹಕ್ಕಿನ ಜತೆಗೆ ಉತ್ತರಾಧಿಕಾರದ ಹಕ್ಕೂ ಪ್ರಾಪ್ತವಾಗಿದೆ ಎಂದು ನ್ಯಾಯಮೂರ್ತಿಗಳಾದ ಆರ್.ಎಂ.ಲೋಧ ಮತ್ತು ಜಗದೀಶ್ ಸಿಂಗ್ ಖೇಹರ್ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ನೀಡಿದೆ.

ಆಸ್ತಿಯ ಹಕ್ಕು, ಜವಾಬ್ದಾರಿ ನಿರ್ವಹಣೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬರಿಗೂ ಸಹ ಸ್ವಾಮ್ಯತೆ ಇರುತ್ತದೆ. ಪೂರ್ವಜರ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಹಕ್ಕು ಇರಬೇಕು ಎಂಬುದು ಸಹ ಸ್ವಾಮ್ಯತೆ ಸಿದ್ಧಾಂತದ ಆಶಯ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಪೂರ್ವಜರ ಆಸ್ತಿಯಲ್ಲಿ ಗಂಡು ಮಕ್ಕಳಿಗಿರುವಷ್ಟೇ ಸಮಾನ ಹಕ್ಕು ಹೆಣ್ಣು ಮಕ್ಕಳಿಗೆ ಇರುವುದಿಲ್ಲ ಎಂಬ ಆಂಧ್ರ ಪ್ರದೇಶ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗಂದೂರಿ ಕೋಟೇಶ್ವರಮ್ಮ ಎಂಬುವವರು ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಪೀಠ ಮೇಲಿನಂತೆ ಅಭಿಪ್ರಾಯಪಟ್ಟಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry