ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ: ಯಡಿಯೂರಪ್ಪ

7

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ: ಯಡಿಯೂರಪ್ಪ

Published:
Updated:

ಶಿಕಾರಿಪುರ: ಹೆಣ್ಣು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿದಾಗ ಅವರು ಆರ್ಥಿಕ ಸ್ವಾವಲಂಬಿಗಳಾಗಿ ಬದುಕಲು ದಾರಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ತಾಲ್ಲೂಕಿನ ಚುರ್ಚಿಗುಂಡಿ ಗ್ರಾಮದಲ್ಲಿ ಈಚೆಗೆ ನಡೆದ ಕುಮದ್ವತಿ ಮಹಿಳಾ ಮಂಡಳಿ ಸಮುದಾಯ ಭವನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತಾನಾಡಿದರು.ಮಹಿಳೆಯರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ತಮ್ಮ ಮಕ್ಕಳನ್ನು ಓದಿಸಲು ಮತ್ತು ಸಂಸಾರದ ಜವಾಬ್ದಾರಿ ನಿರ್ವಹಿಸಲು ಮಹಿಳಾ ಮಂಡಳಿಗಳು ಸಹಕಾರಿಯಾಗಿವೆ. ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡಿದ್ದು, ಮಹಿಳಾ ಮಂಡಳಿಗಳು ಹಾಗೂ ಸ್ತ್ರೀಶಕ್ತಿ ಸಂಘಗಳು ಆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಕುಮದ್ವತಿ ಮಹಿಳಾ ಮಂಡಳಿಯ `ಸಾಧನೆಯ ಹಾದಿಯಲ್ಲಿ~ ಪುಸ್ತಕ ಬಿಡುಗಡೆಗೊಳಿಸಿದರು.ಕುಮದ್ವತಿ ಮಹಿಳಾ ಮಂಡಳಿ ಅಧ್ಯಕ್ಷೆ  ಕೆ.ಎನ್. ಮಂಜುಳಾ ನಾಗಭೂಷಣ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕ ಎಂ.ಬಿ. ಚನ್ನವೀರಪ್ಪ, ರಾಜ್ಯ ಕೈಗಾರಿಕಾ ಸಹಕಾರ ಮಹಾಮಂಡಳಿ ನಿರ್ದೇಶಕ ಬಿ.ಡಿ. ಭೂಕಾಂತ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ. ಸುರೇಶ್, ಸದಸ್ಯೆ ಲತಾ, ಬಿಜೆಪಿ ತಾಲ್ಲೂಕು ಅಧ್ಯಕ್ಷ ರುದ್ರಪ್ಪಯ್ಯ, ತಾಲ್ಲೂಕು ಘಟಕದ ವೀರಶೈವ ಸಮಾಜ ಅಧ್ಯಕ್ಷ ರುದ್ರಮುನಿ, ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿ ಎಚ್. ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry