ಸೋಮವಾರ, ಜೂನ್ 21, 2021
22 °C

ಹೆಣ್ಣು ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸನಗರ:  ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸಮಾಜವನ್ನು ಸರ್ಕಾರವೇ ರಕ್ಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.ಪಟ್ಟಣದಲ್ಲಿ ಒಕ್ಕಲಿಗರ ಭವನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜ ಅಥವಾ ಸಮುದಾಯದಲ್ಲಿನ ಅತಿ ಹಿಂದುಳಿದ ಹಳ್ಳಿಯ ಹೆಣ್ಣು ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕು. ಇದರಿಂದ ಸಮುದಾಯ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, ಸ್ವಾರ್ಥವನ್ನು ಬಿಟ್ಟು ಸಮಾಜದ ಅಭಿವೃದ್ಧಿಗೆಯ ಚಿಂತನೆ ಕಡೆಗೆ ಗಮನ ಹರಿಸಬೇಕು. ಎಂದು ಕರೆ ನೀಡಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪಟೇಲ್ ಗರುಡಪ್ಪ ಗೌಡ ಮಾತನಾಡಿ, ಸುಮಾರು ರೂ 85 ಲಕ್ಷ ವೆಚ್ಚದ ಈ ಭವನವು ತಾಲ್ಲೂಕು ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದರು.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಿ.ವಿ. ರಮೇಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.ಶಾಸಕ ಕಿಮ್ಮನೆ ರತ್ನಾಕರ್, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ, ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆ ಅಧ್ಯಕ್ಷ ಮೂನೇಗೌಡ, ನಿವೃತ್ತ ಎಂಜಿನಿಯರ್ ಅನಂತಕೃಷ್ಣಮೂರ್ತಿ, ವಿಶ್ರಾಂತ ಕುಲಸಚಿವ ಹೂವಯ್ಯ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜೆ.ಎಲ್. ಪದ್ಮನಾಭ್ ಉಪಸ್ಥಿತರಿದ್ದರು.

 

ಸಮಾಜದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅತ್ತಿಕೊಡಿಗೆ ನಾಗಪ್ಪ ಗೌಡ ಸ್ವಾಗತಿಸಿದರು. ಹರೀಶ್, ಪೂರ್ಣೇಶ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಕೆ.ಎನ್. ರತ್ನಾಕರ್ ಪ್ರಾಸ್ತಾವಿಕ ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.