ಬೆಂಗಳೂರು: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಕೆ-ಶಿಪ್) 2ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆದಷ್ಟು ಬೇಗ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.

ಶೂನ್ಯವೇಳೆಯಲ್ಲಿ ಜೆಡಿಎಸ್ನ ಎಚ್.ಡಿ. ರೇವಣ್ಣ ಅವರು ವಿಷಯ ಪ್ರಸ್ತಾಪಿಸಿ, ಈ ಯೋಜನೆಗೆ ಮಾರ್ಚ್ 19ರಂದೇ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಕಾಮಗಾರಿಗಳನ್ನು ಇದುವರೆಗೂ ಆರಂಭಿಸಿಲ್ಲ ಎಂದು ಆಕ್ಷೇಪಿಸಿದರು.

ಈ ಕುರಿತು ಉತ್ತರ ನೀಡಿದ ಸಚಿವರು `2ನೇ ಹಂತದ ಯೋಜನೆಯಲ್ಲಿ 70 ಪ್ಯಾಕೇಜ್ಗಳ ಪೈಕಿ 69 ಪ್ಯಾಕೇಜ್ಗಳಿಗೆ ಟೆಂಡರ್ ಸ್ವೀಕರಿಸಲಾಗಿದೆ. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ತಾಂತ್ರಿಕ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಅದು ಪೂರ್ಣಗೊಂಡ ತಕ್ಷಣವೇ ಕಾಮಗಾರಿಗಳನ್ನು ಆರಂಭಿಸಲಾಗುವುದು' ಎಂದು ಹೇಳಿದರು. `ಯಾವುದೇ ಕಾರಣಕ್ಕೂ ಕಾಮಗಾರಿಯನ್ನು ವಿಳಂಬ ಮಾಡುವುದಿಲ್ಲ. ಈ ವಿಷಯದಲ್ಲಿ ಆತಂಕ ಬೇಡ' ಎಂದರು.

ಅನ್ಯಾಯ ಆಗದಂತೆ ಕ್ರಮ
ಬೆಂಗಳೂರು: ಹಾಸನ ಮತ್ತು ಶಿವಮೊಗ್ಗದ ಪಶುವೈದ್ಯಕೀಯ ಕಾಲೇ ಜುಗಳಿಗೆ ಮಾನ್ಯತೆ ದೊರಕಿಸಿ ಕೊಡಲು ಪ್ರಯತ್ನ ನಡೆದಿದೆ. ಅಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.

ಜೆಡಿಎಸ್ನ ಎಚ್.ಡಿ.ರೇವಣ್ಣ ಅವರು ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದು ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. 3-4 ಬಾರಿ ಸಭೆಗಳು ನಡೆದಿವೆ.

ಈಗಾಗಲೇ 391ಪಶುವೈದ್ಯರ ನೇಮಕ ಪ್ರಕ್ರಿಯೆ ಜಾರಿಯಲ್ಲಿದೆ. ಶಿವಮೊಗ್ಗ ಮತ್ತು ಹಾಸನ ಪಶುವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಅವಕಾಶ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.