ಹೆಬ್ಬೆಟ್ಟು ಮಂಜನ ಪೋಷಕರ ವಿಚಾರಣೆ

7

ಹೆಬ್ಬೆಟ್ಟು ಮಂಜನ ಪೋಷಕರ ವಿಚಾರಣೆ

Published:
Updated:

ಬೆಂಗಳೂರು: ಉದ್ಯಮಿ ದಯಾನಂದ ಪೈ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಭಾನುವಾರ ರೌಡಿ ಹೆಬ್ಬೆಟ್ಟು ಮಂಜನ ಪೋಷಕರ ವಿಚಾರಣೆ ನಡೆಸಿದ್ದಾರೆ.

ಶಿವಮೊಗ್ಗದ ವಿನೋಬನಗರದಲ್ಲಿರುವ ಮಂಜನ ಮನೆ ಮೇಲೆ ಭಾನುವಾರ ದಿಢೀರ್ ದಾಳಿ ನಡೆಸಿದ ಪೊಲೀಸರು, ಆತನ ತಂದೆ ಡಾಕಪ್ಪ, ಸಹೋದರ ಕುಮಾರ್ ಹಾಗೂ ಮಂಜನ ಸಹಚರರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.ಮಂಜ ತಾನು ದುಬೈನಲ್ಲಿರುವುದಾಗಿ ಹೇಳುತ್ತಿರುವುದು ಸುಳ್ಳು. ಆತ ಚಿಕ್ಕಮಗಳೂರಿನಲ್ಲೇ ತಲೆಮರೆಸಿಕೊಂಡಿದ್ದಾನೆ ಎಂದು ಮಂಜನ ಎದುರಾಳಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಮಂಜನಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ.ಈ ನಡುವೆ ಬಸವನಗುಡಿ ಪೊಲೀಸರು ಹೆಬ್ಬೆಟ್ಟು ಮಂಜನ ಸಹಚರ ವಿಘ್ನೇಶ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತ, ಶುಕ್ರವಾರ ಮೈಸೂರಿನಿಂದ ಬಸ್‌ನಲ್ಲಿ ಮಡಿಕೇರಿಗೆ ಹೋಗುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿಯಿಂದ ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ಹೇಳಿದ್ದಾರೆ.ನಗರದ ರಾಮಕೃಷ್ಣ ಆಶ್ರಮ ವೃತ್ತದ ಬಳಿ ಮಂಗಳವಾರ (ಅ.16) ಪೈ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಬಳಿಕ ಮಂಜ ಮಾಧ್ಯಮಗಳಿಗೆ ಕರೆ ಮಾಡಿ, ಜಮೀನು ವಿವಾದದ ಕಾರಣದಿಂದ ನಾನೇ ಈ ದಾಳಿ ನಡೆಸಿದೆ ಎಂದು ಸಮರ್ಥಿಸಿಕೊಂಡಿದ್ದ ಎನ್ನಲಾಗಿದೆ. ಆದರೆ, ಕರೆ ಮಾಡಿದ್ದು ಆತನೇ ಎಂಬುದು ಈವರೆಗೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry