ಶನಿವಾರ, ಮಾರ್ಚ್ 6, 2021
29 °C

ಹೆಲ್ಮೆಟ್ ರಹಿತ ಪ್ರಯಾಣ: 5,861 ಬೈಕ್ ಸವಾರರ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಲ್ಮೆಟ್ ರಹಿತ ಪ್ರಯಾಣ: 5,861 ಬೈಕ್ ಸವಾರರ ವಿರುದ್ಧ ಪ್ರಕರಣ

ಬೆಂಗಳೂರು: ಹೆಲ್ಮೆಟ್ ಕಡ್ಡಾಯ ನಿಯಮ ಉಲ್ಲಂಘನೆ ವಿರುದ್ಧ ನಗರದ ವಿವಿಧೆಡೆ ಗುರುವಾರ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಒಟ್ಟು 5,861 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ₹ 5.86 ಲಕ್ಷ ದಂಡ ವಸೂಲಿ ಮಾಡಿದ್ದಾರೆ.



‘ಬೆಳಿಗ್ಗೆಯಿಂದ ಸಂಜೆ 6 ಗಂಟೆವರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಈ ಪೈಕಿ ಪೂರ್ವ ವಿಭಾಗದಲ್ಲಿ 2,924 ಹಾಗೂ ಪಶ್ಚಿಮ ವಿಭಾಗದಲ್ಲಿ 2,937 ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಸಂಚಾರ ವಿಭಾಗ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ತಿಳಿಸಿದರು.



‘ಕಾರ್ಯಾಚರಣೆಗಾಗಿ ಸಾರಿಗೆ ಅಧಿಕಾರಿಗಳು ಮತ್ತು ಸಂಚಾರ ಪೊಲೀಸರನ್ನೊಳಗೊಂಡ 10 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಗರದ ಹಲವೆಡೆ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡುತ್ತಿವೆ’ ಎಂದು ಹೇಳಿದರು. ನಿಯಮ ಉಲ್ಲಂಘನೆ ವಿರುದ್ಧ ಜ. 20ರಿಂದ ಕಾರ್ಯಾಚರಣೆ ಆರಂಭಿಸಿ 1,522 ವಿರುದ್ಧ ಪ್ರಕರಣ ದಾಖಲಿಸಿ, ₹ 1.5 ಲಕ್ಷ ದಂಡ ವಸೂಲಿ ಮಾಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.