ಮಂಗಳವಾರ, ಜೂನ್ 22, 2021
28 °C

ಹೇಮ ಗಂಗೋತ್ರಿಯಲ್ಲಿ ಸೌಲಭ್ಯಗಳ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: `ಹೇಮ ಗಂಗೋತ್ರಿ ಸ್ನಾತಕೋತ್ತರ ಕೇಂದ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ಇಲ್ಲಿ ಕೆಲವು ಮೂಲ ಸೌಲಭ್ಯಗಳ ಕೊರತೆ ಇದೆ. ಶೀಘ್ರದಲ್ಲೇ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಲಾಗುವುದು~ ಎಂದು ವಿಧಾನಪರಿಷತ್ ಹಾಗೂ ಮೈಸೂರು ವಿ.ವಿ. ಸಿಂಡಿಕೇಟ್ ಸದಸ್ಯ ಮರಿತಿಬ್ಬೇಗೌಡ ನುಡಿದರು.ಹೇಮ ಗಂಗೋತ್ರಿಯ ಸ್ನಾತಕೋತ್ತರ ಕೇಂದ್ರದ ವಿಣಿಜ್ಯ ವಿಭಾಗದವರು ಬುಧವಾರ ಆಯೋಜಿಸಿದ್ದ `ವಾಣಿಜ್ಯೋತ್ಸವ-2012~ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಆರಂಭವಾಗಿ ಸುಮಾರು ಎರಡು ದಶಕವಾದರೂ ಹೊಸ ಬ್ಲಾಕ್‌ಗಳ ನಿರ್ಮಾಣವಾಗಿಲ್ಲ. ಇದನ್ನು ಗಮನಿಸಿ ಈಗಾಗಲೇ 3 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ವಿಶ್ವವಿದ್ಯಾಲಯದ ಮುಂದಿನ ಸಭೆಯಲ್ಲಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಭಿವೃದ್ಧಿಗೆ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದರು.`ನಾಡಿನ ಅಭಿವೃದ್ಧಿಗೆ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ವಾಣಿಜ್ಯ ಶಿಕ್ಷಣ ಪಡೆಯುವುದು ಅಗತ್ಯ. ಇಂಥ ಕಾರ್ಯಕ್ರಮಗಳು ಮಕ್ಕಳ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತವೆ. ಇಂಥ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಬೇಕು~ ಎಂದರು.ಪ್ರಾಸ್ತಾವಿಕ ಮಾತನಾಡಿದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ದೇವರಾಜ ಟಿ.ಎಸ್, `ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹೊರತರುವ, ಆ ಮೂಲಕ ಅವರಲ್ಲಿ ಆಸತ್ಮಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 

ಜಿಲ್ಲೆಯ 30 ಪದವಿ ಕಾಲೇಜುಗಳ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ವಿದ್ಯಾರ್ಥಿಗಳಿಗಾಗಿ ಕಾಮರ್ಸ್ ಅಡ್ವರ್ಟೈಸಿಂಗ್, ಕಾಮರ್ಸ್ ಕ್ವಿಜ್ ಹಾಗೂ ಕಾಮರ್ಸ್ ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ~ ಎಂದರು.ಕೃಷಿ ಮಹಾವಿದ್ಯಾಲಯದ ಡೀನ್  ಡಾ. ಎಂ.ಎ. ಶಂಕರ್ ಹಾಗೂ ಎಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು.ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ವಿ.ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ನಿಖತರಿಜ್ವಾನಾ ಸ್ವಾಗತಿಸಿ,. ರಾಣಿ ಎಸ್.ಕೆ. ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.