ನವದೆಹಲಿ: ಹೈದರಾಬಾದ್- ಕರ್ನಾಟಕ ಭಾಗದ ಜನರ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಸಂವಿಧಾನದ 371 ಕಲಮಿಗೆ ತಿದ್ದುಪಡಿ ಮಾಡಿ ತೀರಾ ಹಿಂದುಳಿದಿರುವ ಈ ಭಾಗದ ಆರು ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾಪ ಶುಕ್ರವಾರ ಸಂಪುಟದ `ರಾಜಕೀಯ ವ್ಯವಹಾರಗಳ ಸಮಿತಿ~ (ಸಿಸಿಪಿಎ) ಮುಂದೆ ಚರ್ಚೆಗೆ ಬರುತ್ತಿದೆ.

ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾಪಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ಒಪ್ಪಿಗೆ ನೀಡಿದ ಬಳಿಕ ಸಚಿವ ಸಂಪುಟದ ಮುಂದೆ ಬರಲಿದೆ. ಆ ನಂತರ ಸರ್ಕಾರ ಮಸೂದೆ ಕರಡು ಸಿದ್ಧಪಡಿಸಿ ಸಂಸತ್ತಿನ ಮುಂದೆ ಮಂಡಿಸಲಿದೆ.

ಇದು ಸಂವಿಧಾನ ತಿದ್ದುಪಡಿ ಮಸೂದೆ ಆಗಿರುವುದರಿಂದ ಅಂಗೀಕಾರಕ್ಕೆ 2/3ರಷ್ಟು ಬೆಂಬಲ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ತನ್ನ ಮಿತ್ರ ಪಕ್ಷಗಳು ಹಾಗೂ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಹೈದರಾಬಾದ್- ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಬಹು ವರ್ಷಗಳಿಂದ ಕೇಳಿಬರುತ್ತದೆ. ಅಲ್ಲದೆ, ಇದಕ್ಕೆ ಎಲ್ಲ ಪಕ್ಷಗಳ ಬೆಂಬಲವೂ ಇರುವುದರಿಂದ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗುವ ಸಾಧ್ಯತೆಯಿದೆ.

ಗೃಹ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾಪ ಬೀದರ್, ಗುಲ್ಬರ್ಗ, ರಾಯಚೂರು, ಯಾದಗೀರ್, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಜನರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದೆ. ಇದಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ನೇಮಕಾತಿ ನಿಯಮ ರೂಪಿಸಬೇಕಿದೆ. ಅಲ್ಲದೆ, ಈ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮಸೂದೆ ಅವಕಾಶ ಕಲ್ಪಿಸಲಿದೆ. ಹೈದರಾಬಾದ್- ಕರ್ನಾಟಕದ ವಿಶೇಷ ಸ್ಥಾನಮಾನದ ಪ್ರಸ್ತಾಪ ಮಹಾರಾಷ್ಟ್ರದ ವಿದರ್ಭ ಹಾಗೂ ಆಂಧ್ರದ ತೆಲಂಗಾಣಕ್ಕಿಂತ ಉತ್ತಮವಾಗಿದೆ. ಕಾಂಗ್ರೆಸ್ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಜನ ಬೆಂಬಲ ಗಳಿಸಲು ಮಸೂದೆ ಜಾರಿಗೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.