ಶನಿವಾರ, ಜೂನ್ 19, 2021
23 °C

ಹೈಕಮಾಂಡ್ ಮಧ್ಯ ಪ್ರವೇಶಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ಪಕ್ಷದ ಹೈಕಮಾಂಡ್ ತಕ್ಷಣವೇ ಮಧ್ಯ ಪ್ರವೇಶಿಸಬೇಕು ಎಂದು ಗೃಹ ಸಚಿವ ಆರ್.ಅಶೋಕ ಒತ್ತಾಯಿಸಿದರು.ಸೋಮವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವ ವಿ.ಸೋಮಣ್ಣ, ಶಾಸಕರಾದ ಎಂ.ಕೃಷ್ಣಪ್ಪ, ಸತೀಶ್ ರೆಡ್ಡಿ, ವಿಜಯಕುಮಾರ್, ಎಸ್.ರಘು ಮತ್ತಿತರರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, `ಪಕ್ಷದ ಹೈಕಮಾಂಡ್ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿನ ಗೊಂದಲದ ಬಗ್ಗೆ ಗಮನ ಹರಿಸಲು ಕೇಂದ್ರ ನಾಯಕರಿಗೆ ಸಾಧ್ಯವಾಗಿಲ್ಲ. ಮಂಗಳವಾರ ಬೆಳಿಗ್ಗೆಯೊಳಗೆ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.