ಶುಕ್ರವಾರ, ನವೆಂಬರ್ 22, 2019
22 °C

ಹೈಕೋರ್ಟ್‌ಗೆ ಮೇಲ್ಮನವಿ

Published:
Updated:

ಬೆಂಗಳೂರು: 8 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಕೇಂದ್ರೀಯ ಆಡಳಿತ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲು ಏರಲು ಸಿದ್ಧತೆ ನಡೆಸಿವೆ.ಐಎಎಸ್ ಅಧಿಕಾರಿಗಳಾದ ಬಿ.ಎನ್.ಕೃಷ್ಣಯ್ಯ ಸೇರಿದಂತೆ ಒಟ್ಟು 12 ಮಂದಿಯನ್ನು ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಇದರಲ್ಲಿ ಎಂಟು ಮಂದಿ ವರ್ಗಾವಣೆ ಆದೇಶವನ್ನು ಸಿ.ಎ. ಟಿ.ಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ತಡೆಯಾಜ್ಞೆ ನೀಡಿದ್ದು, ಅದನ್ನು ಪ್ರಶ್ನಿಸಿ, ಹೈಕೋರ್ಟ್‌ನಲ್ಲಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಪ್ರತಿಕ್ರಿಯಿಸಿ (+)