ಶನಿವಾರ, ಏಪ್ರಿಲ್ 17, 2021
23 °C

ಹೈಕೋರ್ಟ್‌ಗೆ ರೇವಣ್ಣ ಮೊರೆ-ಇಂದು ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿರುವ ಬೆನ್ನಲ್ಲೇ, ತಮ್ಮ ವಿರುದ್ಧದ ಈ ಆರೋಪಗಳ ರದ್ದತಿಗೆ ಕೋರಿ ರೇವಣ್ಣ ಅವರೇ ಖುದ್ದಾಗಿ ಮಂಗಳವಾರ ಕೋರ್ಟ್ ಮೊರೆ ಹೋಗಿದ್ದಾರೆ.1994ರಿಂದ 2001ರ ಅವಧಿಯಲ್ಲಿ ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದ ವೇಳೆ ಸುಮಾರು 55 ಕೋಟಿ ರೂಪಾಯಿ ಹಣಕಾಸು ಅವ್ಯವಹಾರ ನಡೆದಿದೆ. ಇದರ ಜೊತೆಗೆ ಸುಮಾರು 38ಕೋಟಿ ರೂಪಾಯಿಗಳ ಇತರ ಅವ್ಯವಹಾರ ನಡೆಸಿದ್ದಾರೆ.ಮಹಾಮಂಡಲದ ಲೆಕ್ಕಪತ್ರಗಳ ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದರ ಜೊತೆಗೆ ಕೆಎಂಎಫ್ ನೇಮಕಾತಿಯಲ್ಲೂ ಅಕ್ರಮ ಎಸಗಿದ್ದಾರೆ ಎನ್ನುವ ಆರೋಪ ಅವರ ಮೇಲಿದ್ದು ಇವುಗಳನ್ನು ರದ್ದು ಮಾಡಲು ಆದೇಶಿಸಬೇಕು ಎಂದು ಅವರು ಕೋರ್ಟ್ ಅನ್ನು ಕೋರಿದ್ದಾರೆ.ತಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ. ಹಾಲಿ ಸರ್ಕಾರ ದುರುದ್ದೇಶದಿಂದ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿದೆ. ಈ ಆರೋಪಗಳಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎನ್ನುವುದು ಅವರ ವಾದ.ಅರ್ಜಿಯಲ್ಲಿ ಯಡಿಯೂರಪ್ಪನವರ ಜೊತೆಗೆ ಲೆಕ್ಕಪತ್ರ ಇಲಾಖೆಯ ಇತರ ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸುವಂತೆ ಹಾಗೂ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಆದೇಶಿಸುವಂತೆ ಸತೀಶ್ ಭಟ್ ಎನ್ನುವವರು ರೇವಣ್ಣ ವಿರುದ್ಧ ಸಲ್ಲಿಸಿರುವ ಅರ್ಜಿ ಇತ್ಯರ್ಥಕ್ಕೆ ಬಾಕಿ ಇರುವುದು ಇಲ್ಲಿ ಉಲ್ಲೇಖಾರ್ಹ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.