ಭಾನುವಾರ, ಮೇ 9, 2021
19 °C
ಮೇಯರ್, ಉಪಮೇಯರ್ ಮೀಸಲಾತಿ

ಹೈಕೋರ್ಟ್‌ನಿಂದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಅಥವಾ ಉಪ ಮೇಯರ್ ಹುದ್ದೆಗಳಲ್ಲಿ ಯಾವುದಾದರೂ ಒಂದನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಿಡುವಂತೆ ನಿರ್ದೇಶನ ನೀಡಬೇಕೆ ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನುಹೈಕೋರ್ಟ್ ಇತ್ಯರ್ಥಪಡಿಸಿದೆ.ಲೋಕೇಶ ವಿ. ನಾಯಕ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ನಡೆಸಿದರು. ಮೀಸಲಾತಿ ಕೋರಿರುವುದು 2012-13ನೇ ಸಾಲಿಗೆ. ಆದರೆ 2013-14ನೇ ಸಾಲಿನ ಅವಧಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.ಇದಕ್ಕೂ ಮುನ್ನ ಇದೇ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, `ಮೇಯರ್ ಅಥವಾ ಉಪ ಮೇಯರ್ ಹುದ್ದೆಗಳಲ್ಲಿ ಯಾವುದಾದರೂ ಒಂದನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಿಡಬೇಕು' ಎಂದು ಮಧ್ಯಂತರ ಆದೇಶ ಹೊರಡಿಸಿದ್ದರು.ಅರ್ಜಿ ಇತ್ಯರ್ಥ ಆಗಿರುವ ಕಾರಣ, ಮಧ್ಯಂತರ ಆದೇಶವೂ ತೆರವಾದಂತೆ ಆಗಿದೆ. 2013-14ನೇ ಸಾಲಿನಲ್ಲಿ ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ಸರ್ಕಾರ ಫೆಬ್ರುವರಿಯಲ್ಲೇ ಆದೇಶ ಹೊರಡಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.