ಗುರುವಾರ , ಮೇ 19, 2022
21 °C

ಹೈಕೋರ್ಟ್‌ನ ಮರು ಎಣಿಕೆ ಆದೇಶ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರದ ಸದಸ್ಯೆ ಜೆ.ಶಾಂತಾ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸಿ, ನಾಲ್ಕು ವಾರದ ಒಳಗೆ ಮರು ಮತ ಎಣಿಕೆ  ಮಾಡುವಂತೆ 

ಸೂಚಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಮಂಗಳವಾರ ಸುಪ್ರೀಂ ಕೋರ್ಟ್ ಅಮಾನತು ಮಾಡಿದೆ.ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಶಾಂತಾ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್.ಎಲ್.ಗೋಖಲೆ ಹಾಗೂ ರಂಜನ ಪ್ರಕಾಶ್ ದೇಸಾಯಿ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ನ ರಜಾ ಕಾಲದ ಪೀಠವು ಈ ಆದೇಶ ನೀಡಿದೆ.ಇದೇ ವೇಳೆ ಕೋರ್ಟ್ ಶಾಂತಾ ವಿರುದ್ಧ ದೂರು ನೀಡಿದ್ದ ಕಾಂಗ್ರೆಸ್ ಕಾರ್ಯಕರ್ತ ಎಂ.ಚಂದ್ರೇಗೌಡ ಸೇರಿದಂತೆ ಆರು ಜನರಿಗೆ ನೋಟಿಸ್ ಜಾರಿ ಮಾಡಿದೆ.2009ರ ಏಪ್ರಿಲ್‌ನಲ್ಲಿ ನಡೆದಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪರ ಏಜೆಂಟ್ ಚಂದ್ರಗೌಡ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜೂನ್ 11ರಂದು ಈ ಆದೇಶ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.