ಹೈಕೋರ್ಟ್‌ ಮೆಟ್ಟಿಲೇರಿದ ಮಂಗಳಾ

7

ಹೈಕೋರ್ಟ್‌ ಮೆಟ್ಟಿಲೇರಿದ ಮಂಗಳಾ

Published:
Updated:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂಲಕ ಇತ್ತೀಚೆಗೆ ನಡೆದ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ತಮ್ಮ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಗೆ ನೀಡಿರುವ ದೂರು ರದ್ದು ಮಾಡಬೇಕು ಎಂದು ಕೋರಿ, ಆಯೋಗದ ಸದಸ್ಯೆ ಡಾ. ಮಂಗಳಾ ಶ್ರೀಧರ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್‌. ಕೇಶವ ನಾರಾಯಣ ಅವರು, ವಿಧಾನ ಸೌಧ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಉಪ ಕಾರ್ಯದರ್ಶಿ ದೇವರಾಜು ಹಾಗೂ ಅಧಿಕಾರಿ ಹುದ್ದೆಯ ಅಭ್ಯರ್ಥಿಯಾಗಿದ್ದ ಡಾ. ಮೈತ್ರಿ ಅವರಿಗೆ ನೋಟಿಸ್‌ ಜಾರಿಗೆ ಬುಧವಾರ ಆದೇಶಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry