ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸದೆ ಹೈಕೋರ್ಟ್ನಿಂದ ತೀವ್ರ ತರಾಟೆಗೆ ಒಳಗಾಗಿದ್ದ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದೆ. ಎಲ್ಲ ಶಾಲೆಗಳಲ್ಲಿಯೂ ಈ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅದು ಸೋಮವಾರ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದೆ.

`ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನದ ಮೇರೆಗೆ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕುವಾರು ಸೌಲಭ್ಯಗಳ ಕುರಿತು ವೆಬ್ಸೈಟ್ನಲ್ಲಿ ಅಳವಡಿಸಲಾಗಿದೆ~ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಆದೇಶಿಸಲು ಕೋರಿ ವಕೀಲ ಎ.ವಿ.ಅಮರನಾಥನ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇದಾಗಿದೆ. ಸಂವಿಧಾನದ ಪ್ರಕಾರ 6ರಿಂದ 14 ವರ್ಷದ ವಯೋಮಾನದವರಿಗೆ ಉಚಿತ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಆದರೆ ಶಾಲೆಗಳ ಸ್ಥಿತಿ ಮಾತ್ರ ಶೋಚನೀಯವಾಗಿದೆ ಎನ್ನುವುದು ಅರ್ಜಿದಾರರ ಆರೋಪ.

ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸುತ್ತಿದೆ. ಕಳೆದ ಡಿಸೆಂಬರ್ ಅಂತ್ಯದ ಒಳಗೇ ತನ್ನ ಆದೇಶ ಪಾಲನೆ ಮಾಡುವಂತೆ ಪೀಠ ನಿರ್ದೇಶಿಸಿತ್ತು. ಆದರೆ ಸರ್ಕಾರ ವಿಳಂಬ ನೀತಿ ಅನುಸರಿಸಿದ್ದ ಹಿನ್ನೆಲೆಯಲ್ಲಿ ಕಳೆದ ಬಾರಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಕೆಂಡಾಮಂಡಲವಾಗಿದ್ದರು.

ಅಂಚೆ ಕಚೇರಿಗೆ ಸ್ಥಳ: ವಸಂತನಗರದ ಸಮೀಪದಲ್ಲಿ ಅಂಚೆ ಕಚೇರಿ ಸ್ಥಾಪನೆ ಮಾಡುವ ಸಂಬಂಧ 10 ದಿನಗಳಲ್ಲಿ ಜಾಗ ಗುರುತಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಇಲ್ಲಿ ಇದ್ದ ಅಂಚೆ ಕಚೇರಿಯನ್ನು ಪ್ರಧಾನ ಅಂಚೆ ಕಚೇರಿಗೆ ಸೇರ್ಪಡೆ ಮಾಡಿರುವ ಕ್ರಮ ಪ್ರಶ್ನಿಸಿ ಸತಿಂದರ್ಪಾಲ್ ಚೋಪ್ರಾ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

21ರಂದು ಆದೇಶ: ಅಧಿಕಾರ ದುರುಪಯೋಗ ಆರೋಪ ಹೊತ್ತ ರಾಜ್ಯದ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ಅವರ ವಿರುದ್ಧ ದಾಖಲಾಗಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ಕೋರ್ಟ್ 21ರಂದು ಆದೇಶ ಹೊರಡಿಸಲಿದೆ.

ಬಿಎಂಎಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿಯೂ ಆಗಿರುವ ಆಚಾರ್ಯ ಅವರು ಸಂಸ್ಥೆಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಚಾಮರಾಜಪೇಟೆಯ ನಿವಾಸಿ 92 ವರ್ಷದ ಎನ್.ವೆಂಕಟೇಶಯ್ಯ ಎನ್ನುವವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ದಾಖಲು ಮಾಡಿರುವ ದೂರು ಇದಾಗಿದೆ.

ಆಚಾರ್ಯ ಅವರ ಜೊತೆಗೆ ಇತರ ಟ್ರಸ್ಟಿಗಳಾಗಿರುವ ಬಿ.ಎಸ್.ರಾಗಿಣಿ ನಾರಾಯಣ, ಡಾ. ಪಿ. ದಯಾನಂದ ಪೈ, ಎಚ್.ಯು.ತಲವಾರ್, ವಿಜಯ ಗೋರೆ ಅವರನ್ನೂ ಆರೋಪಿಗಳನ್ನಾಗಿಸಲಾಗಿದೆ. ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೆ, ಬೇಡವೆ ಎಂಬ ಬಗ್ಗೆ ಅಂದು ನ್ಯಾಯಾಧೀಶ ಎನ್. ಕೆ.ಸುಧೀಂದ್ರ ರಾವ್ ಆದೇಶ ಪ್ರಕಟಿಸಲಿದ್ದಾರೆ.

ಕೃಷ್ಣಪ್ಪ ವಿರುದ್ಧ ತನಿಖೆ
ನಕಲಿ ದಾಖಲೆ ಸೃಷ್ಟಿಸಿ ಜಮೀನು ಒತ್ತುವರಿ ಮಾಡಿರುವ ಆರೋಪ ಹೊತ್ತ ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ವಿರುದ್ಧ ತನಿಖೆ ನಡೆಸಿ ಮೇ 21ರ ಒಳಗೆ ವರದಿ ನೀಡುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೋಮವಾರ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಕೃಷ್ಣಪ್ಪ ಅವರ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಆದೇಶಿಸಿದ್ದಾರೆ.

ರಘು ಎನ್ನುವವರು ಸಲ್ಲಿಸಿರುವ ದೂರು ಇದಾಗಿದೆ. `ಉತ್ತರ ತಾಲ್ಲೂಕು ದಾಸನಪುರ ಹೋಬಳಿ ಗೌಡಹಳ್ಳಿಯ ಬಳಿ 12 ಎಕರೆ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಿವೇಶನ ಮಾಡಿ ಅದನ್ನು ಕೃಷ್ಣಪ್ಪ ಮಾರಾಟ ಮಾಡಿದ್ದಾರೆ.

ಶಿವನಪುರ ಗ್ರಾಮದಲ್ಲಿ 37 ಎಕರೆ ಜಮೀನಿನಲ್ಲಿ ನಕಲಿ ಭೂ ಪರಿವರ್ತನಾ ದಾಖಲೆ ಸಲ್ಲಿಸಿ ನೆಲಮಂಗಲ ಅಭಿವೃದ್ಧಿ ಪ್ರಾಧಿಕಾರದಿಂದ ಬಡಾವಣೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೆ. ಸಮಗ್ರ ಅಭಿವೃದ್ಧಿ ಯೋಜನೆ ಅಡಿ (ಸಿಡಿಪಿ) ಹಸಿರು ವಲಯ ಎಂದು ಗುರುತಿಸಲಾದ ಜಮೀನುಗಳನ್ನು ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ ಎನ್ನುವುದು ದೂರು.

ಸಹ ಆರೋಪಿಗಳಾಗಿರುವ ನೆಲಮಂಗಲ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಪ್ಪಣ್ಣ, ಎ.ಸಿ. ಮುನಿರಾಜು, ಶ್ರಿನಿವಾಸ್ ಹಾಗೂ ಪ್ರೇಮನಾಥ್ ರೆಡ್ಡಿ ಅವರ ವಿರುದ್ಧವೂ ತನಿಖೆಗೆ ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.